LATEST NEWS
ಮಂಗಳೂರು: ‘ಟೈಗರ್’ ವಿರುದ್ದ ಸಿಡಿದೆದ್ದ ಬೀದಿ ವ್ಯಾಪಾರಿಗಳಿಂದ ಪಾಲಿಕೆ ಆಯುಕ್ತರ ಕಚೇರಿ ಮುಂದೆ ಧರಣಿ..!
ಮಂಗಳೂರು: ಮಂಗಳೂರು ನಗರ ಪಾಲಿಕೆ ಬೀದಿಬದಿ ವ್ಯಾಪಾರಸ್ತರ ವಿರುದ್ದ ಟೈಗರ್ ಕಾರ್ಯಾಚರಣೆ ಆರಂಭಿಸಿದ್ದು ಇದಕ್ಕೆ ಬೀದಿ ಬದಿ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಂಗಳವಾರವೂ ನಗರ ಪ್ರದೇಶದಲ್ಲಿ ತೆರವು ಪ್ರಕ್ರಿಯೆ ಮುಂದುವರಿದಿದೆ. ಇದನ್ನು ಖಂಡಿಸಿ ಬೀದಿಬದಿ ವ್ಯಾಪಾರಿಗಳು ಪಾಲಿಕೆಯ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ಆರಂಭಿಸಿದ್ದಾರೆ. ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕು ಮತ್ತು ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾ ನಿರತರು ಪಾಲಿಕೆ ಆಯುಕ್ತರನ್ನು ಒತ್ತಾಯಿಸುತ್ತಿದ್ದಾರೆ. ಅನಧಿಕೃತ ಬೀದಿಬದಿ ವ್ಯಾಪಾರಿಗಳ ತೆರವು ನೆಪದಲ್ಲಿ ತಳ್ಳುಗಾಡಿ, ಗೂಡಂಗಡಿಗಳು, ಸಾಮಗ್ರಿಗಳಿಗೆ ಹಾನಿ ಮಾಡಿದ್ದಲ್ಲದೆ ಆಹಾರ, ತಿಂಡಿತಿನಿಸುಗಳನ್ನು ನಾಶಪಡಿಸಿರುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರಣಿಗೆ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಝ್, ಅಧ್ಯಕ್ಷ ಮುಹಮ್ಮದ್ ಮುಸ್ತಫಾ ಮತ್ತಿತರರು ನೇತೃತ್ವ ನೀಡಿದ್ದಾರೆ.