LATEST NEWS
ಸೈಡ್ ಕೊಡಲು ಹೋಗಿ ಪ್ರಪಾತಕ್ಕೆ ಬಿದ್ದ ಲಾರಿ…!!
ಮಂಗಳೂರು ಜುಲೈ 27: ಓವರ್ ಲೋಡ್ ಇದ್ದ ಲಾರಿಯೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದೇರಳಕಟ್ಟೆ ಕಡೆಯಿಂದ ತೌಡುಗೋಳಿ ಕಡೆಗೆ ಪ್ಲೈವುಡ್ ತುಂಬಿಕೊಂಡು ಈ ಲಾರಿ ಚಲಿಸುತ್ತಿತ್ತು. ಈ ನಡುವೆ ತಿರುವಿನಲ್ಲಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಗೆ ಲಾರಿ ಡ್ರೈವರ್ ಸೈಡ್ ಕೊಡಲು ಹೋಗಿದ್ದಾನೆ. ಆದರೆ ಲಾರಿಯಲ್ಲಿ ಓವರ್ ಲೋಡ್ ಇದ್ದ ಹಿನ್ನೆಲೆಯಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.
You must be logged in to post a comment Login