DAKSHINA KANNADA
ಮಂಗಳೂರು : ದ್ವಿಚಕ್ರ ವಾಹನ ಕದಿಯುತ್ತಿದ್ದ ಖದೀಮ ಪೊಲೀಸ್ ಬಲೆಗೆ..!

ಮಂಗಳೂರು ನಗರದಲ್ಲಿ ದ್ವಿ ಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು : ಮಂಗಳೂರು ನಗರದಲ್ಲಿ ದ್ವಿ ಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ನಗರದ ಪೂರ್ವ ಪೋಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ
ಕಳವಾಗಿದ್ದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೊಂಡಾಗ ಆರೋಪಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಉಳ್ಳಾಲ ತೊಕ್ಕೊಟ್ಟು ಮೂಲದ ಶನೀಝ್ ಬಂಧಿತ ಆರೋಪಿಯಾಗಿದ್ದಾನೆ.
ಶನೀಝ್ ಈತನು ಕಳವು ಮಾಡಿದ ಸ್ಕೂಟರನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದಾಗ, ನಗರದ ಪಂಪುವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಕಳವು ಮಾಡಿದ್ದ ಸ್ಕೂಟರನ್ನು ಹಾಗೂ ಈ ಹಿಂದೆ ಈತನು ಕಳವು ಮಾಡಿದ್ದ ಮತ್ತೊಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಆತನಿಂದ ಸುಮಾರು ಒಂದು ಲಕ್ಷ ಹತ್ತು ಸಾವಿರ ಬೆಲೆ ಬಾಳುವ ಎರಡು ದ್ವಿ ಚಕ್ರ ವಾಹನಗಳನ್ನುಕದ್ರಿ ಪೊಲೀಸರು ಸ್ವಾಧಿನ ಪಡಿಸಿಕೊಂಡಿದ್ದಾರೆಎ.
ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.