Connect with us

  LATEST NEWS

  ಮಂಗಳೂರು : ವಿಶ್ವಕರ್ಮ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪರ್ಷೋತ್ತಮ್ ರೂಪಾಲಾ

  ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ಸೆ.17ರ ಭಾನುವಾರ ವಿಶ್ವಕರ್ಮ ಜಯಂತಿಯನ್ನು ನಗರದ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ಆಚರಿಸಲಾಯಿತು.

  ಮಂಗಳೂರು: ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ಸೆ.17ರ ಭಾನುವಾರ ವಿಶ್ವಕರ್ಮ ಜಯಂತಿಯನ್ನು ನಗರದ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ಆಚರಿಸಲಾಯಿತು.

  ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆ ಸಚಿವರಾದ ಪರ್ಷೋತ್ತಮ್ ರೂಪಾಲಾ ಜಯಂತಿಯನ್ನು ಉದ್ಘಾಟಿಸಿದರು.

  ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಮಣ್ಣಾಗುಡ್ಡೆಯ ಕಾರ್ಪೂರೇಟರ್ ಸಂಧ್ಯಾ ಮೋಹನ್, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಆಡಳಿತ ಮೋಕೆಸ್ತಾರಾದ ಕೆ.ಕೇಶವ ಆಚಾರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್. ಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

  ಪೂರ್ಣಪ್ರಜ್ಞಾ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರ ಜಿ. ಯಶವಂತ ಆಚಾರ್ಯ ಶ್ರೀ ವಿಶ್ವಕರ್ಮ ಜಯಂತಿ ಸಂದೇಶ ನೀಡಿದರು.

  ವಿಶ್ವಕರ್ಮ ಜನಾಂಗದವರು ಹಾಗೂ ವಿವಿಧ ಸಂಘ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply