DAKSHINA KANNADA
ಮಂಗಳೂರು : ಆ್ಯಸಿಡ್ ದಾಳಿಯ ಸಂತ್ರಸ್ಥೆಯರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ವಿಹೆಚ್‌ಪಿ ನಾಯಕ ಶರಣ್ ಪಂಪ್‌ವೆಲ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನಲ್ಲಿ ಇತ್ತಿಚೆಗೆ ನಡೆದ ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡಿದ್ದ ಸಂತ್ರಸ್ಥ ವಿದ್ಯಾರ್ಥಿನಿಯರ ಮನೆಗಳಿಗೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಭೇಟಿ ನೀಡಿದರು.
ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ಕೊಠಡಿಯೊಳಗೆ ತೆರಳುವ ವೇಳೆ ಕೇರಳದ ಯುವಕನೋರ್ವ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ.
ಆ್ಯಸಿಡ್ ದಾಳಿಯಿಂದ ಗಾಯಗೊಂಡಿದ್ದ ಕಡಬ ಪರಿಸರದ ಮೂರು ವಿದ್ಯಾರ್ಥಿನಿಯರ ಮನೆಗೆ ಭೇಟಿ ನೀಡಿದ ಶರಣ್ ಪಂಪ್‌ವೆಲ್ ಮನೆಮಂದಿಯ ಜತೆ ಹಾಗೂ ಸಂತ್ರಸ್ಥೆಯರ ಜತೆ ಮಾತನಾಡಿ ಅವರಿಗೆ ಧೈರ್ಯ ತುಂಬಿದರು.