BANTWAL
ಮಂಗಳೂರು ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ..!
ಮಂಗಳೂರು: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ ಬಂಟ್ವಾಳ ಬಿಸಿ ರೋಡ್ ಸಮೀಪ ನಡೆದಿದೆ.
ಮುಂಜಾನೆ 6.20 ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ಬ್ಯಾಗಿನಲ್ಲಿದ್ದ ಆಧಾರ್ ಕಾರ್ಡ್ ಆಧಾರದಲ್ಲಿ ಆಕೆಯನ್ನು ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂದು ಗುರುತಿಸಲಾಗಿದೆ. ಆಧಾರ್ ಕಾರ್ಡ್‌ನಲ್ಲಿ c/o ಎಂ.ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿ.ಸಿ. ರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್‌ನಲ್ಲಿ ರೈಲು ಹಾದುಹೋಗುವಾಗ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಹಿಳೆ ಕುಳಿತುಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗನ್ನು ರೈಲ್ವೆ ಸಿಬ್ಬಂದಿ ಬಿ.ಸಿ. ರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.ಆತ್ಮಹತ್ಯೆ ಕಾರಣ ಮತ್ತು ಆಕೆಯ ವಿಳಾಸ ಇತ್ಯಾದಿ ವಿವರ ಸರಿಯಾಗಿದೆಯೇ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗು ತಜ್ಞ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಬಂಟ್ವಾಳ ನಗರ ಪೋಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.