Connect with us

    LATEST NEWS

    ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ನೌಕಾಪಡೆ ತಂಡ ಮುನ್ನಡೆಸಲಿದ್ದಾರೆ ಮಂಗಳೂರಿನ ಕುವರಿ ದಿಶಾ ಅಮೃತ್

    ಮಂಗಳೂರು ಜನವರಿ 21: ದೇಶ 74ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗಿದ್ದು, ಈ ಬಾರಿ ಕರ್ತವ್ಯ ಪಥದಲ್ಲಿ ನೌಕಾಪಡೆಯ ತಂಡವನ್ನು ಮಂಗಳೂರಿನ ಕುವರಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ದಿಶಾ ಅಮೃತ್ ಅವರು ಮುನ್ನಡೆಸಲಿದ್ದಾರೆ.


    ನಾರಿ ಶಕ್ತಿ ಸ್ತಬ್ದಚಿತ್ರ ಇರುವ ತುಕಡಿಯಲ್ಲಿ 144 ಮಂದಿ ನಾವಿಕರಿಲಿದ್ದು, ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್ ಜೊತೆಗೆ, ಮತ್ತೊಬ್ಬ ಮಹಿಳಾ ಅಧಿಕಾರಿ, ಸಬ್ ಲೆಫ್ಟಿನೆಂಟ್ ವಲ್ಲಿ ಮೀನಾ ಎಸ್ ಕೂಡಾ ಜೊತೆಯಲ್ಲಿರುವರು.


    ದಿಶಾ ಅವರು ಮಂಗಳೂರಿನ ಬೋಳೂರು ಸಮೀಪದ ತಿಲಕ್‌ ನಗರದ ಅಮೃತ್‌ ಕುಮಾರ್‌ ಮತ್ತು ಲೀಲಾ ಅಮೃತ್‌ ದಂಪತಿಯ ಪುತ್ರಿ, 29 ವರ್ಷದ ಲೆಫ್ಟಿನೆಂಟ್ ಕಮಾಂಡರ್ ನೌಕಾ ವಾಯು ಕಾರ್ಯಾಚರಣೆಯ ಅಧಿಕಾರಿಯಾಗಿದ್ದು, ಅಂಡಮಾನ ಮತ್ತು ನಿಕೋಬಾರ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಮೃತ್ 2008 ರಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ ನ ಗಣರಾಜ್ಯೋತ್ಸವ ತಂಡದ ಭಾಗವಾಗಿದ್ದರು.
    2016 ರಲ್ಲಿ ನೌಕಾಪಡೆಗೆ ಸೇರಿದ್ದು, 2017 ರಲ್ಲಿ ತನ್ನ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ವೇಳೆ ಡಾರ್ನಿಯರ್ ಏರ್ ಕ್ರಾಫ್ಟ್ ಅನ್ನು ಚಲಾಯಿಸುತ್ತಿದ್ದರು.

     

    Share Information
    Advertisement
    Click to comment

    Leave a Reply

    Your email address will not be published. Required fields are marked *