Connect with us

BELTHANGADI

ಮಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಅಪರಾಧಿ ಸಂಜೀವ ನಾಯ್ಕರಿಗೆ ದಂಡದೊಂದಿಗೆ  3 ವರ್ಷ ಜೈಲಿಗೆ ತಳ್ಳಿದ ಕೋರ್ಟ್..!

ಮಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದ್ದು ಅಪರಾಧಿಗೆ  3 ವರ್ಷಗಳ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಮಾನು ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ  ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಸಂಜೀವ ನಾಯ್ಕ(57) ಶಿಕ್ಷೆಗೊಳಗಾದವ.  ಜ.23ರಂದು  ಸಣಜೀವ ನಾಯ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕ ರವಿ ಬಿ.ಎಸ್ ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರು ಸಾಕ್ಷ್ಯ, ದಾಖಲೆಗಳು, ಪೂರಕ ಸಾಕ್ಷ್ಯ ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆಯ ಕಲಂ 354(ಎ) ಮತ್ತು ಪೋಕ್ಸೊ ಕಾಯಿದೆ ಕಲಂ 8ರಂತೆ 3 ವರ್ಷಗಳ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 25,000 ರೂ. ಪರಿಹಾರವನ್ನು ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *