Connect with us

    LATEST NEWS

    ಮಂಗಳೂರು : ಪೊಲೀಸ್ ಬಿಗಿ ಭದ್ರತೆಯಲ್ಲಿ ಶವಪರೀಕ್ಷೆ

    ಮಂಗಳೂರು : ಪೊಲೀಸ್ ಬಿಗಿ ಭದ್ರತೆಯಲ್ಲಿ ಶವಪರೀಕ್ಷೆ

    ಮಂಗಳೂರು ಡಿಸೆಂಬರ್ 20: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಗಲಾಟೆ ಸಂದರ್ಭ ಮೃತಪಟ್ಟ ನೌಸೀನ್ (23) ಮತ್ತು ಜಲೀಲ್ ಕುದ್ರೋಳಿ (49) ಅವರ ಶವಪರೀಕ್ಷೆಗೆ ಪೊಲೀಸರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ.

    ವೆನ್ಲಾಕ್ ಆಸ್ಪತ್ರೆಯ ಶವಪರೀಕ್ಷಾ ಕೊಠಡಿಗಳು ಮೃತದೇಹಗಳನ್ನು ಸ್ಥಳಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ. ಆಸ್ಪತ್ರೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಹಾಕಲಾಗಿದ್ದು ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ.

    ಶವಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಅನಂತರ ಪೊಲೀಸ್ ಭದ್ರತೆಯಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸುವ ಸಾಧ್ಯತೆ ಬಗ್ಗೆಯೂ ಪೊಲೀಸರು ಚಿಂತನೆ ನಡೆಸಿದ್ದಾರೆ. ಮಂಗಳೂರಿನಲ್ಲಿ ಕರ್ಫ್ಯೂ ಇರುವುದರಿಂದ ಜನಜೀವನ ಸ್ಥಗಿತಗೊಂಡಿದೆ. ಜನರು ರಸ್ತೆಗಳಲ್ಲಿ ಸಂಚರಿಸಲು ಪೊಲೀಸರು ಅವಕಾಶ ಕೊಡುತ್ತಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply