ಮಂಗಳೂರು ನವೆಂಬರ್ 19: 2006ರಲ್ಲಿ ಸುರತ್ಕಲ್ ನ ಹೊಸಬೆಟ್ಟು ಸಮೀಪ ನಡೆದ ಸುಖಾನಂದ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಹಲವಾರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದಾರೆ.


ಬಂಧಿತನನ್ನು ಅಬ್ದುಲ್ ಸಲಾಂ ಅಡ್ಡೂರು, ಪ್ರಾಯ (47) ಎಂದು ಗುರುತಿಸಲಾಗಿದೆ . 2006ರ ಡಿಸೆಂಬರ್ 1 ರಂದು ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದರು, ಅದರಲ್ಲಿ ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ @ ಅಡ್ಡೂರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದರು. ನಂತರ ಕಬೀರ್ ನನ್ನು ವಾಹನದಲ್ಲಿ ಕೇರಳದ ಕಾಸರಗೋಡು ಬಳಿ ಬಿಟ್ಟು ನಂತರ ತಲೆ ಮರೆಸಿಕೊಂಡಿರುವುದಾಗಿದೆ.

Read This – ಬಂಟ್ವಾಳ – ಕೌಟುಂಬಿಕ ಕಲಹ ಬುರ್ಖಾ ಧರಿಸಿಕೊಂಡು ಬಂದು ಪತಿಯನ್ನು ಕತ್ತಿಯಿಂದ ಕಡಿದ ಪತ್ನಿ

ಈ ಹಿನ್ನಲೆ ಅಬ್ದುಲ್ ಸಲಾಂ ಅಡ್ಡೂರು ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ನಡುವೆ ಕೊಲೆ ಕೃತ್ಯ ನಡೆದ ಮೂರು ತಿಂಗಳ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದು, ಪೊಲೀಸರಿಗೆ ಆರೋಪಿಯನ್ನು ಅರೆಸ್ಟ್ ಮಾಡಲು ಸಾಧ್ಯವಾಗಿಲ್ಲ. ಇದೀಗ ಆರೋಪಿ ಬಜಪೆ ಠಾಣಾ ವ್ಯಾಪ್ತಿಯಲ್ಲಿ ಇರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ದಿನಾಂಕ: 18.11.2025 ರಂದು ಸಂಜೆ ಬಜಪೆ ಕಿನ್ನಿಪದವು ಬಳಿ ಅರೆಸ್ಟ್ ಮಾಡಿದ್ದಾರೆ.

Read This- ಬಂಟ್ವಾಳ – ಕೌಟುಂಬಿಕ ಕಲಹ ಬುರ್ಖಾ ಧರಿಸಿಕೊಂಡು ಬಂದು ಪತಿಯನ್ನು ಕತ್ತಿಯಿಂದ ಕಡಿದ ಪತ್ನಿ

ಈತನು 2007ನೇ ಇಸವಿಯಲ್ಲಿ ಪಾಸ್ ಪೋರ್ಟ್ ಮಾಡಿ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ತಲೆಮರೆಸಿಕೊಂಡು ಇತ್ತೀಚಿಗೆ ವಾಪಸ್ಸು ಬಂದಿರುತ್ತಾನೆ. ಈತನು ಅಡ್ಡೂರಿನಲ್ಲಿರುವ ತನ್ನ ಮನೆಯನ್ನು ನೆಲಸಮಗೊಳಿಸಿ ಅಲ್ಲಿಂದ ಬಜಪೆಯ ಕಿನ್ನಿಪದವಿನ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುತ್ತಾನೆ. ಈತನ ಸಹೋದರ ಲತೀಫ್ @ ಅಡ್ಡೂರು ಲತೀಫ್ ವಿದೇಶದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈ ಪ್ರಕರಣದಲ್ಲಿ 16 ಆರೋಪಿಗಳನ್ನು ಈ ಹಿಂದೆ ಬಂದಿಸಿದ್ದು ಉಳಿದ 11 ಜನ ಆರೋಪಿಗಳು ತಲೆಮರೆಸಿಕೊಂಡಿರುತ್ತಾರೆ.
ಈತನ ಮೇಲೆ ಬಜಪೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಈತನ ಮೇಲೆ ಬಜಪೆ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿರುತ್ತದೆ. ಈತನ ಮೇಲೆ ಮಾನ್ಯ ನ್ಯಾಯಾಲಯದಿಂದ ಹಲವಾರು ಬಾರಿ ವಾರಂಟ್ ಗಳನ್ನು ಹೊರಡಿಸಿದ್ದು ಸದ್ರಿ ಆರೋಪಿಯು ಸುಮಾರು 19 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಈತನ ವಿರುದ್ಧ ಠಾಣೆಯಲ್ಲಿ ಕಲಂ 209 ಬಿಎನ್.ಎಸ್ ರಂತೆ ಪ್ರಕರಣವನ್ನು ದಾಖಲಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

Share Information