Connect with us

    BANTWAL

    ಮಾಣಿ ಮೈಸೂರು ರಸ್ತೆಯಲ್ಲಿ ಕಾರು ಟಿಪ್ಪರ್ ಲಾರಿ ಅಪಘಾತ – ನಾಲ್ವರಿಗೆ ಗಾಯ

    ಬಂಟ್ವಾಳ ಜುಲೈ 25: ಕಾರು ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪರ್ಲೊಟ್ ಸಮೀಪ ಮಾಣಿ ಮೈಸೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

    ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.
    ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ರಸ್ತೆಗಳು ಜಾರುವ ಸ್ಥಿತಿಯಲ್ಲಿದ್ದು ಮಿತಿ ಮೀರಿದ ವೇಗದಲ್ಲಿ ವಾಹನ ಚಲಾಯಿಸಿದರೆ, ನಿಯಂತ್ರಣ ತಪ್ಪಿ ಅಪಘಾತಗಳು ನಡೆಯುವ ಸಂಭವವಿದ್ದು ವಾಹನ ಸವಾರರು ಎಚ್ಚರಿಕೆಯಿಂದ ವಾಹನಗಳನ್ನು ಚಲಾಯಿಸಲು ಹೆದ್ದಾರಿ ಮತ್ತು ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply