Connect with us

    LATEST NEWS

    ಮಣಿಪಾಲ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು…!!

    ಮಣಿಪಾಲ ಅಕ್ಟೋಬರ್ 18: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದ ಘಟನೆ ಪೆರಂಪಳ್ಳಿ ಸುಂದರಿ ಗೇಟ್ ಸಮೀಪ ಸೋಮವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿ ಇತರ 2-3 ಮಂದಿ ಇದ್ದರೆನ್ನಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕಾರು ಮಾತ್ರ ನಜ್ಜುಗುಜ್ಜಾಗಿದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.


    ಮರವಂತೆ ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ 2-3 ಪಲ್ಟಿಯಾಗಿ ಮತ್ತೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಅಲ್ಲಿ ಬಾಕಿಯಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ
    ಅಪಘಾತ ಸಂಭವಿಸಿದ ಪ್ರದೇಶ ತಿರುವಿನಿಂದ ಕೂಡಿದ್ದು, ಅಪಾಯಕಾರಿಯಾಗಿದೆ. ವಾರಕ್ಕೆ ಒಂದೆರಡು ಅಪಘಾತಗಳು ಇಲ್ಲಿ ಸರ್ವೇ ಸಾಮಾನ್ಯ. ಈ ತಿರುವನ್ನು ಸರಿ ಮಾಡಬೇಕೆಂದು ಆಗ್ರಹಿಸಿದರೂ ಇದುವರೆಗೆ ಸರಿ ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply