LATEST NEWS
ಮಣಿಪಾಲ – ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ರೆಸ್ಟೊರೆಂಟ್ ಬೆಂಕಿಗಾಹುತಿ

ಉಡುಪಿ ಜುಲೈ 15: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ರೆಸ್ಟೊರೆಂಟ್ ಒಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಣಿಪಾಲದಲ್ಲಿ ಇಂದು ನಡೆದಿದೆ.
ಮಣಿಪಾಲ ಎಂಐಟಿ ಎದುರು ಇರುವ ಖಾಸಗಿ ಲಾಡ್ಜ್‌ನ ರೆಸ್ಟೋರೆಂಟ್‌ನಲ್ಲಿ ಈ ಅವಘಡ ಸಂಭವಿಸಿದ್ದು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ಅನ್ನು ವ್ಯಾಪಿಸಿದೆ.
ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳವನ್ನು ಕಾರ್ಯಚರಣೆಯಿಂದ ನಡೆಸಿ ಬೆಂಕಿ ನಂದಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ.
