LATEST NEWS
ಜೂನ್ 21 ರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಎಲ್ಲಾ ವಿಭಾಗಗಳು ಸಾರ್ವಜನಿಕರ ಸೇವೆಗೆ
ಉಡುಪಿ ಜೂನ್ 19: ಜೂನ್ 21 ರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಎಲ್ಲಾ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.
ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ಮಣಿಪಾಲ ಕೆಎಂಸಿಯಲ್ಲಿ ಕೆಲ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು, ಈಗ ಕೊರೊನಾ ಪ್ರಕರಣ ಇಳಿಕೆಯಲ್ಲಿದ್ದು, ಈ ಹಿನ್ನಲೆ ಸೋಮವಾರದಿಂದ ಹೊರ ರೋಗಿ ವಿಭಾಗಗಳು, ಒಳರೋಗಿ ಸೇವೆಗಳು,ನಾನ್ – ಓ ಪಿ ಡಿ ವಿಶೇಷ ಸೇವೆಗಳು ಮತ್ತು ಆರೋಗ್ಯತ ಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಹೊರ ರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳೆಗ್ಗೆ 8.00 ರಿಂದ ಸಂಜೆ 5.00 ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು ಹೇಳಿದ್ದಾರೆ.
ಎಲ್ಲ ರೀತಿಯ ಶಸ್ತ್ರಚಿಕಿತ್ಸಾ ಸೌಲಭ್ಯಗಳು ಕೂಡ ದೊರೆಯಲಿವೆ. ಆದರೆ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಯಾಗಲು ಕೋವಿಡ್ -19 ಪರೀಕ್ಷೆ (RT-PCR) ಕಡ್ಡಾಯವಾಗಿದೆ. ಅಥವಾ 72 ಗಂಟೆಗಳ ಒಳಗಿನ ಕೊರೊನಾ ಪರೀಕ್ಷೆ ರಿಪೋರ್ಟ್ ಇರಬೇಕು.