LATEST NEWS
ಮಣಿಪಾಲ – ಮಹಿಳಾ ಪೊಲೀಸ್ ಸಿಬ್ಬಂದಿಗೆ ಅವಾಜ್ ಹಾಕಿದ ಆರೋಪಿ ಅರೆಸ್ಟ್

ಮಣಿಪಾಲ ಜುಲೈ 27: ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಿನ್ನಲೆ ವಿಚಾರಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ವ್ಯಕ್ತಿ. ಜುಲೈ 26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದಾಗ ಈ ಘಟನೆ ನಡೆದಿದೆ. ಬಂಧಿತನನ್ನು ನಿನ್ನೆ (ಜು.26) ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
