ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಆರೆಸ್ಟ್

ಉಡುಪಿ ನವೆಂಬರ್ 17: ರಸ್ತೆಯಲ್ಲಿ ಮಂಜಾನೆ ವಾಕಿಂಗ್ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪರ್ಕಳ, ಸಣ್ಣಕ್ಕಿಬೆಟ್ಟು ನಿವಾಸಿ ದೀಪಕ್ ನಾಯಕ್ ಎಂದು ಗುರುತಿಸಲಾಗಿದೆ. ಉಡುಪಿಯ ಕೆನರಾ ಬ್ಯಾಂಕ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ದೀಪಕ್ ನಾಯಕ್ ಮುಂಜಾನೆ ವೇಳೆ ವಾಕಿಂಗ್ ಹೋಗುವ ಯುವತಿಯರ ದೇಹ ಸ್ಪರ್ಶಿಸಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗುತ್ತಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೆ ರಾತ್ರಿ ವೇಳೆಯೂ‌ ರಸ್ತೆ ಬದಿಯಲ್ಲಿ ನಿಂತು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments

comments