LATEST NEWS
ಮಣಿಪಾಲದ ವೇಶ್ಯಾ ವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಇಬ್ಬರು ಸಂತ್ರಸ್ಥ ಮಹಿಳೆಯರ ರಕ್ಷಣೆ..!

ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ರಂದು ಬಂಧಿಸಿದ್ದಾರೆ ಇವರ ಜೊತೆಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ ರೆಸಿಡೆನ್ಸಿಯ ಎರಡು ಫ್ಲ್ಯಾಟ್‌ಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಾನಂದ ಕೆ. ಸಿಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭ ದಂಧೆ ನಡೆಸುತ್ತಿದ್ದ ಗಣೇಶ್, ಸುಧೀರ್ ಮತ್ತು ಮಾರುತಿ ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಸಂಬಂಧಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ. ಪ್ರಕರಣದ ಆರೋಪಿಗಳು ಜಗದೀಶ ಯಾನೆ ಜಗ್ಗ ಎಂಬಾತನ ಜೊತೆ ಸೇರಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆಯುತ್ತಿರುವ ಆರೋಪಗಳಿದ್ದು ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
