LATEST NEWS
ಮಣಿಪಾಲ – ಅಪಾರ್ಟ್ ಮೆಂಟ್ ನಲ್ಲಿ ವೇಶ್ಯಾವಾಟಿಕೆ – ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

ಮಣಿಪಾಲ ಜುಲೈ 17: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಅದೇ ವಸತಿಗೃಹದ ಸೆಕ್ಯೂರಿಟಿ ಗಾರ್ಡ್ ನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಹೊನ್ನಾವರ ತಾಲೂಕು ಜಲವಳ್ಳಿ ಗ್ರಾಮದ ಗಣೇಶ್ ಗಣಪ ನಾಯ್ಕ್ (38) ಎಂದು ಗುರುತಿಸಲಾಗಿದೆ. ಹೆರ್ಗ ಗ್ರಾಮದ ಈಶ್ವರನಗರದ ಅಪಾರ್ಟ್‌ಮೆಂಟ್ ನ ಮನೆಯೊಂದರಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಇರಿಸಿ ಅಕ್ರಮ ವೇಶ್ಯಾವಾಟಿಕೆಗೆ ಬಳಸಿಕೊಳ್ಳುತಿದ್ದ ಎನ್ನಲಾಗಿದೆ. ಮನೆಯ ಮಾಲಕರು ಮನೆಯ ಬೀಗವನ್ನು ಕೊಟ್ಟು ಹೊರಗೆ ಹೋದಾಗ ಆತ ಈ ಕೀಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ವ್ಯವಹಾರ ನಡೆಸುತಿದ್ದ ಎನ್ನಲಾಗಿದೆ. ಮಾಹಿತಿ ಪಡೆದ ಮಣಿಪಾಲ ಪೊಲೀಸರು ದಾಳಿ ನಡೆಸಿ ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿ ಗಣೇಶ ನಾಯ್ಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
