LATEST NEWS
ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಬಾತ್ ರೂಂ ಸೇರಿಕೊಂಡ ವಿಧ್ಯಾರ್ಥಿ..ಅಗ್ನಿಶಾಮಕದಳದಿಂದ ಕಾರ್ಯಾಚರಣೆ
ಉಡುಪಿ ಜನವರಿ 2: ದಿನಪೂರ್ತಿ ಇಂಟರ್ನೆಟ್ ನಲ್ಲಿ ಇರಬೇಡ ಎಂದು ತಾಯಿ ಜೋರ ಮಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಬಾತ್ ರೂಮ್ ಬಾಗಿಲು ಹಾಕಿ ಗಂಟೆಗಟ್ಟಲೆ ಅವಾಂತರ ಸೃಷ್ಟಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲದ ಎಂಐಟಿ ಕ್ಯಾಂಪಸ್ ಪಕ್ಕದ ಎಓನ್ ಅಪಾರ್ಟ್ಮೆಂಟ್ನಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತಾಯಿ ಮೊಬೈಲ್ ಕಿತ್ತುಕೊಂಡರು ಅಂತ ವಿದ್ಯಾರ್ಥಿಯೊಬ್ಬ ಬಾತ್ ರೂಂ ಸೇರಿಕೊಂಡು ಒಳಗಿಂದ ಬಾಗಿಲು ಹಾಕಿಕೊಂಡಿದ್ದ. ಎಷ್ಟೇ ಬಾಗಿಲು ತಟ್ಟಿದರೂ, ರಿಕ್ವೆಸ್ಟ್ ಮಾಡಿದ್ರೂ ಬಾಗಿಲು ತೆರೆಯದಿದ್ದಾಗ ದಿಕ್ಕುತೋಚದೆ ಅಮ್ಮ ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಸಿಬ್ಬಂದಿಗಳು ಮಣಿಪಾಲಕ್ಕೆ ತೆರಳಿ ಬಾಗಿಲು ತೆರೆಯುವಂತೆ ವಿನಂತಿ ಮಾಡಿಕೊಂಡಿದ್ದಾರೆ. ಆಗಲೂ ಬಾಗಿಲು ತೆರೆಯದಿದ್ದಾಗ ಅಪಾರ್ಟ್ಮೆಂಟ್ನ ಟೆರೇಸ್ ಹತ್ತಿ ಅಗ್ನಿಶಾಮಕ ಸಿಬ್ಬಂದಿಗಳು ಕಿಟಕಿ ಪಕ್ಕ ಇಳಿದು ಬಾತ್ ರೂಮ್ ನ ಕಿಟಕಿ ಗಾಜು ಮುರಿದು ಒಳಗೆ ಪ್ರವೇಶಿಸಿದ್ದಾರೆ. 17 ವರ್ಷದ ವಿದ್ಯಾರ್ಥಿಯನ್ನು ಹೊರಗೆ ತಂದಿದ್ದಾರೆ. ಫೈರ್ ಡಿಎಫ್ ಒ ವಸಂತ್ ಕುಮಾರ್ ಎಚ್. ಎಂ, ನೇತೃತ್ವದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಪ್ರಭುದೇವ ಮಾಣೆ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು.