Connect with us

  LATEST NEWS

  ಮಣಿಪಾಲ – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ

  ಉಡುಪಿ, ಜುಲೈ 10: ಸಿಎ ಓದುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಹೆರ್ಗದಲ್ಲಿ ನಡೆದಿದೆ.


  ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಈ ಯುವತಿ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು.
  ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ತಂದೆತಾಯಿಯೊಂದಿಗೆ ಇದ್ದ ಶ್ರೀನಿಧಿ ಶೆಟ್ಟಿ, ಮನೆಯ ರೂಮ್​ನಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ

  Share Information
  Advertisement
  Click to comment

  You must be logged in to post a comment Login

  Leave a Reply