LATEST NEWS
ಮಣಿಪುರದ ಸಚಿವೆ ಮನೆಗೆ ಬೆಂಕಿ ಇಟ್ಟ ಅಪರಿಚಿತರು…..!!

ಇಂಫಾಲ ಜೂನ್ 15: ಮಣಿಪುರದ ಹಿಂಸಾಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಇಲ್ಲಿಯವರೆಗೆ ಹಿಂಸಾಚಾರವನ್ನು ಕಡಿಮೆ ಸಾದ್ಯವೇ ಆಗಿಲ್ಲ, ಈ ನಡುವೆ ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಂಫೆಲ್‌ನಲ್ಲಿರುವ ಮಣಿಪುರದ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ ರಾತ್ರಿ ಅಪರಿಚಿತರು ಬೆಂಕಿ ಹಚ್ಚಿದ್ದಾರೆ.
ಪೂರ್ವ ಇಂಫಾಲದ ಖಾಮೆಲಾಕ್ ಗ್ರಾಮದಲ್ಲಿ ಬುಧವಾರ ಶಂಕಿತ ಉಗ್ರರು ನಡೆಸಿದ ದಾಳಿ ವೇಳೆ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ಬೆನ್ನಿಗೇ ಸಚಿವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ಧಾರೆ.


ಸಾಂಧರ್ಭಿಕ ಚಿತ್ರ
ಸಚಿವೆ ಕಿಪ್‌ಗೆನ್ ಕುಕಿ ಸಮುದಾಯದ ನಾಯಕಿ. ನಿವಾಸದಲ್ಲಿ ಯಾರು ಇಲ್ಲದ ವೇಳೆ ದಾಳಿಕೋರರು ಬೆಂಕಿ ಹಚ್ಚಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಯಾವುದೇ ಸಂಘಟನೆ ಘಟನೆಯ ಹೊಣೆ ಹೊತ್ತುಕೊಂಡಿಲ್ಲ.