Connect with us

LATEST NEWS

ಹಿಂಸಾಚಾರಕ್ಕೆ ಹೊತ್ತಿ ಉರಿಯುತ್ತಿರುವ ಮಣಿಪುರ – 8 ಜಿಲ್ಲೆಗಳಲ್ಲಿ ಕರ್ಪ್ಯೂ ಜಾರಿ

ಇಂಫಾಲ ಮೇ 04: ಇಂಫಾಲ್ ನಲ್ಲಿ ಬುಡಕಟ್ಟು ಸಮುದಾಯದವರಲ್ಲದ ಮೀಟೀಸ್ ತಮಗೆ ಎಸ್ಟಿ ಸ್ಥಾನಮಾನ ನೀಡಬೇಕೆಂಬ ಆಗ್ರಹ ಮುಂದಿಟ್ಟಿರುವುದನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು. 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಐದು ದಿನಗಳ ಕಾಲ ಇಂಟರ್​ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.


ಮುಂಜಾಗ್ರತೆ ಕ್ರಮವಾಗಿ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್, ಬಿಷ್ಣುಪುರ, ಚುರಾಚಂದ್‌ಪುರ, ಕಾಂಗ್‌ಪೋಕ್ಪಿ ಮತ್ತು ತೆಂಗ್‌ನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಬುಧವಾರ ಟ್ರೈಬಲ್ ಸಾಳಿಡಾರಿಟಿ ಮಾರ್ಚ್ ಅನ್ನು ಚುರಚಂದಪುರ್ ಜಿಲ್ಲೆಯ ತೊರ್ಬುಂಗ್ ಪ್ರದೇಶದಲ್ಲಿ ಆಯೋಜಿಸಿದ್ದ ವೇಳೆ ಹಿಂಸೆ ಆರಂಭಗೊಂಡಿತ್ತು.

ಸಾವಿರಾರು ಮಂದಿ ಭಾಗವಹಿಸಿದ್ದ ಈ ರ್ಯಾಲಿಯಲ್ಲಿ ಬುಡಕಟ್ಟು ಜನರು ಮತ್ತು ಬುಡಕಟ್ಟುಯೇತರರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಬುಧವಾರ ಬುಡಕಟ್ಟು ಸಮುದಾಯಗಳ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರ ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಪಡೆಗಳನ್ನು ನಿಯೋಜಿಸಲಾಗಿದೆ. ಗಲಭೆ ಪೀಡಿತ ಪ್ರದೇಶಗಳಿಂದ ರಕ್ಷಣಾ ಸಿಬ್ಬಂದಿ ಇಲ್ಲಿಯ ತನಕ 4000 ಜನರನ್ನು ರಕ್ಷಿಸಿ ಅವರಿಗೆ ಆಶ್ರಯ ಕಲ್ಪಿಸಿದ್ದಾರೆ ಮತ್ತು ಇನ್ನಷ್ಟು ಜನರನ್ನು ರಕ್ಷಿಸಲಾಗುತ್ತಿದೆ.


ಕೆಲ ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್‌‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಮೇಟಿ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮೇಟಿ ಸಮುದಾಯದ ಮುಖಂಡರು ಬೃಹತ್‌ ಸಮಾವೇಶ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *