LATEST NEWS
ಉಡುಪಿ – ನಕ್ಸಲ್ ತೊಂಬೊಟ್ಟು ಲಕ್ಷ್ಮೀ ಶರಣಾಗತಿ
ಉಡುಪಿ ಫೆಬ್ರವರಿ 02: ಕರ್ನಾಟಕದಲ್ಲಿ ನಕ್ಸಲ್ ಶರಣಾಗತಿ ಮುಂದುವರೆದಿದೆ. ಕಳೆದ 20 ವರ್ಷಗಳಿಂದ ನಾಪತ್ತೆಯಾಗಿದ್ದು, ಪೊಲೀಸರಿಗೆ ವಾಂಟೆಂಡ್ ನಕ್ಸಲ್ ಆಗಿರುವ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.
ಇತ್ತೀಚೆಗೆ ನಕ್ಸಲ್ ನಾಯಕ ವಿಕ್ರಂ ಗೌಡ ಶೂಟೌಟ್ ನಂತರ ಬಹುತೇಕ ಕರ್ನಾಟಕದ ಎಲ್ಲಾ ನಕ್ಸಲ್ ಶರಣಾಗತಿ ಹಾದಿ ಹಿಡಿದಿದ್ದಾರೆ. ಈಗಾಗಲೇ ನಕ್ಸಲ್ ಚಟುವಟಿಕೆಯಲ್ಲಿದ್ದ ಎಲ್ಲರೂ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ನಡುವೆ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ತೊಂಬಟ್ಟುವಿನ ಲಕ್ಷ್ಮೀ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.
ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರಾದ ಶ್ರೀಪಾಲ ಇದ್ದರು. ಎಸ್ ಪಿ ಡಾ.ಕೆ ಅರುಣ್, ಹೆಚ್ಚುವರಿ ಎಸ್ಪಿ ಎಸ್ ಟಿ ಸಿದ್ದಲಿಂಗಪ್ಪ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆಯು ನಡೆಯಿತು. ನಕ್ಸಲ್ ಚಳವಳಿಯಲ್ಲಿ ಉಡುಪಿ ಜಿಲ್ಲೆಯ ವಿಕ್ರಂ ಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಇದರಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಎನ್ಕೌಂಟರ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದರು. ಇದೀಗ ಲಕ್ಷ್ಮಿ, ಪೊಲೀಸರಿಗೆ ಶರಣಾಗಿದ್ದಾರೆ. ಲಕ್ಷ್ಮಿ ಕಳೆದ ಹಲವು ವರ್ಷಗಳಿಂದ ಆಂಧ್ರಪ್ರದೇಶದಲ್ಲಿ ತನ್ನ ಪತಿ, ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.