LATEST NEWS
ಮೀಸಲಾತಿ ಕಿಚ್ಚಿಗೆ ಮಹಾರಾಷ್ಟ್ರ ಧಗ ಧಗ : ಲಾಠಿ ಚಾರ್ಜ್‌ಗೆ ಸೇಡು- ಕರ್ನಾಟಕದ್ದು ಸೇರಿ 6 ಬಸ್ಗಳಿಗೆ ಬೆಂಕಿ..!
ಮರಾಠಾ ಮೀಸಲಾತಿ ಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಹಿಂಸಾಚಾರ ರೂಪ ಪಡೆದುಕೊಂಡಿದ್ದು ಈ ಸಂದರ್ಭ ಕರ್ನಾಟಕದ 2 ಬಸ್‌ಗಳು ಸೇರಿ ಆರು ಬಸ್ಗಳಿಗೆ ಬೆಂಕಿ ಹಚ್ಚಲಾಗಿದೆ.
ಮುಂಬೈ : ಮರಾಠಾ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಹಿಂಸಾಚಾರ ರೂಪ ಪಡೆದುಕೊಂಡಿದ್ದು ಈ ಸಂದರ್ಭ ಕರ್ನಾಟಕದ 2 ಬಸ್‌ಗಳು ಸೇರಿ ಆರು ಬಸ್ಗಳಿಗೆ ಬೆಂಕಿ ಹಚ್ಚಲಾಗಿದೆ.
ಘಟನೆಯಲ್ಲಿ ಪೊಲೀಸರು ಸೇರಿ ಸುಮಾರು 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ವಿವಿಧೆಡೆ ಮರಾಠಾ ಮೀಸಲಾತಿಗೆ ಒತ್ತಾಯಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿವೆ.
ಜಾಲನಾ ಜಿಲ್ಲೆಯ ಶಹಘಡ ಬಳಿ ನಡೆದ ಹೋರಾಟದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಉದ್ರಿಕ್ತರ ಗುಂಪು ಧುಳೆ – ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದರು. ಇದನ್ನು ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು.
ಇದರಿಂದ ಕೆರಳಿದ ಪ್ರತಿಭಟನಾಕಾರರು ಹೆದ್ದಾರಿಯಲ್ಲಿ ಸಿಕ್ಕ ಸಿಕ್ಕ ಬಸ್ಗಳ ಮೇಲೆ ಕಲ್ಲು ತೂರಿದ್ದಾರೆ ಮಾತ್ರವಲ್ಲ ಪ್ರಯಾಣಿಕರು ಬಸ್‌ನಲ್ಲಿ ಇದ್ದಾಗಲೇ ಪೆಟ್ರೋಲ್ ಸುರಿದು ಬೆಂಕಿ ಕೂಡ ಹಚ್ಚಿದರು.
ನೋಡ ನೋಡುತ್ತಿದ್ದಂತೆ ಆರು ಬಸ್ಸುಗಳು ಧಗಧಗನೇ ಹೊತ್ತಿ ಉರಿದಿವೆ.
ಔರಾಂಗಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್‌ನಲ್ಲಿ 45 ಪ್ರಯಾಣಿಕರಿದ್ದು ಈ ಬಸ್ಸಿಗೂ ಬೆಂಕಿ ಹಚ್ಚಲಾಗಿದೆ ಎಂದು ಚಾಲಕ, ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಎಲ್.ಎಲ್. ಲಮಾಣಿ ಮಾಹಿತಿ ನೀಡಿದ್ದಾರೆ.
ಅಲ್ಲದೇ ಕರ್ನಾಟಕದ ಮತ್ತೊಂದು ಬಸ್ಗೂ ಬೆಂಕಿ ಹಚ್ಚಲಾಗಿದೆ. ಘಟನೆಯಿಂದ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿಂದೆ ಮರಾಠಾ ಸಮುದಾಯಕ್ಕೆ ರಾಜ್ಯ ಸರ್ಕಾರ ನೀಡಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಹಿನ್ನೆಲೆ ಹೋರಾಟಗಾರರು ಜಾಲನಾ ಜಿಲ್ಲೆಯ ಶಹಘಡ ಬಳಿ ಹೆದ್ದಾರಿ ತಡೆದು ಹಿಂಸೆಗೆ ಮುಂದಾಗಿದ್ದಾರೆ.
महाराष्ट्र के जालना की आज की तस्वीरे..#MarathaReservation #MarathaArakshan #Maratha pic.twitter.com/FQacjvjdWp
— Vivek Gupta (@imvivekgupta) September 2, 2023