DAKSHINA KANNADA
ಬ್ರೇಕ್ ಫೇಲ್ ಆಗಿ ಹೊಂಡಕ್ಕೆ ಬಿದ್ದ ಮಾರ್ಬಲ್ ತುಂಬಿದ್ದ ಲಾರಿ – ನಾಲ್ವರು ಕಾರ್ಮಿಕರು ಗಂಭೀರ
ವಿಟ್ಲ ಅಕ್ಟೋಬರ್ 04: ಮಾರ್ಬಲ್ ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಗಳ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.
ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೇಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ ಎಂದು ಮಾಹಿತಿ ಲಭಿಸಿದೆ.
You must be logged in to post a comment Login