LATEST NEWS
ಮಾರ್ಚ್ 19 ರಿಂದ 30 ದಿನಗಳ ಕಾಲ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ
ಮಾರ್ಚ್ 19 ರಿಂದ 30 ದಿನಗಳ ಕಾಲ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ
ಉಡುಪಿ, ಮಾರ್ಚ್ 7 : ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ-ಉಡುಪಿ ರಸ್ತೆ ವ್ಯಾಪ್ತಿಯಲ್ಲಿ ಕಳೆದ ಜುಲೈ 10 ಮತ್ತು 13 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಆಗುಂಬೆ ಘಾಟಿಯಲ್ಲಿ ಕಿ.ಮೀ 33.70 (14ನೇ ತಿರುವು), ಕಿ.ಮೀ. 35.60 (7ನೇ ತಿರುವು) ಮತ್ತು ಕಿ.ಮೀ 37 (ಆನೆ ಬಂಡೆ) ಗಳಲ್ಲಿ ಗುಡ್ಡ ಕುಸಿತ ಉಂಟಾಗಿ ಭಾಗಶಃ ರಸ್ತೆ ಕುಸಿದಿರುವುದರಿಂದ ಸದರಿ ಜಾಗಗಳಲ್ಲಿ ಶಾಶ್ವತ ದುರಸ್ಥಿ ಕೈಗೊಳ್ಳುವ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು, ದುರಸ್ಥಿ ಕಾಮಗಾರಿಯನ್ನು ಕೈಗೊಳ್ಳಬೇಕಿರುವುದರಿಂದ ಮಾರ್ಚ್ 19 ರಿಂದ 30 ದಿನಗಳ ಕಾಲ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಆದೇಶಿಸಿರುತ್ತಾರೆ.
ಈ ಹಿಂದೆ ಮಾರ್ಚ್ 1 ರಿಂದ 31 ರ ವರೆಗೆ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಮಾರ್ಚ್ 1 ರಿಂದ 18 ರ ವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿರುವ ಹಿನ್ನಲೆಯಲ್ಲಿ ಆದೇಶವನ್ನು ಮಾರ್ಪಾಡು ಮಾಡಲಾಗಿದೆ.
ಸದರಿ ಘಾಟಿ ರಸ್ತೆಯನ್ನು ಬಳಸಿ ವಿದ್ಯಾರ್ಥಿಗಳು ಹೆಬ್ರಿ-ಆಗುಂಬೆ-ಶೃಂಗೇರಿ ಮಾರ್ಗಗಳನ್ನು ಬಳಸಿ ಪರೀಕ್ಷೆಗೆ ತೆರಳಬೇಕಾಗಿರುವುದರಿಂದ ಸದರಿ ಘಾಟಿ ರಸ್ತೆಯ ಸಂಚಾರವನ್ನು ಮಾರ್ಚ್ 19 ರಿಂದ 30 ದಿನಗಳ ಕಾಲ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಆದೇಶಿಸಿರುತ್ತಾರೆ.
ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವ ಹಿತದೃಷ್ಟಿಯಿಂದ ಹಾಗೂ ಉತ್ತಮ ಗುಣ ಮಟ್ಟದ ರಸ್ತೆ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ವಾಹನ ಸಂಚಾರವನ್ನು ನಿಷೇಧಿಸುವುದು ಅಗತ್ಯ ಎಂದು ಮನಗಂಡು ಮಾರ್ಚ್ 19 ರಿಂದ 30 ದಿನಗಳ ಕಾಲ ಆಗುಂಬೆ ಘಾಟಿ ವ್ಯಾಪ್ತಿಯಲ್ಲಿ ಸಂಚರಿಸುವ ಲಘು ವಾಹನಗಳಾದ ಸಾಮಾನ್ಯ ಬಸ್‍ಗಳು, ಜೀಪು, ವ್ಯಾನ್, ಎಲ್‍ಸಿವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು, ಉಡುಪಿ-ಕಾರ್ಕಳ-ಮಾಳಾಘಾಟ್-ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169) ರಸ್ತೆಯಲ್ಲಿ ಸಂಚರಿಸುವಂತೆ, ಭಾರೀ ವಾಹನಗಳಾದ ರಾಜಹಂಸ, ಐರಾವತಾ ಬಸ್‍ಗಳು ಮತ್ತು ಖಾಸಗಿ ಐಶಾರಾಮಿ ಬಸ್‍ಗಳು, ಬುಲೆಟ್ ಟ್ಯಾಂಕರ್ಸ್, ಷಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸೀಸ್‍ಗಳು, ಉಡುಪಿ-ಕುಂದಾಪುರ-ಸಿದ್ದಾಪುರ-ಹೊಸಂಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52 ) ರಸ್ತೆಯಲ್ಲಿ ಸಂಚರಿಸುವಂತೆ, ಕಾಮಗಾರಿ ನಡೆಯುವ ವೇಳೆ ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಆದೇಶ ಹೊರಡಿಸಿರುತ್ತಾರೆ.