ಕುಂದಾಪುರ ಪ್ಲೈಓವರ್ ಪೂರ್ಣಗೊಳಿಸಲು ಮಾರ್ಚ್ 2020 ಕೊನೆಯ ಗಡುವು ಜಿಲ್ಲಾಧಿಕಾರಿ ಜಗದೀಶ್

ಉಡುಪಿ, ನವೆಂಬರ್ 6 : ಉಡುಪಿ ಜಿಲ್ಲೆಯ ಹಲವು ಸಮಸ್ಯೆಗಳ ಬಗ್ಗೆ , ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರೊಂದಿಗೆ ಬ್ರಹ್ಮಗಿರಿಯ ಪತ್ರಕರ್ತರ ಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಗದೀಶ್ ಭಾಗವಹಿಸಿದರು.

ಕುಂದಾಪುರ ಪ್ಲೈ ಓವರ್ ಸಮಸ್ಯೆ ಕುರಿತಂತೆ, ಕಾಮಗಾರಿಯನ್ನ ಸಂಪೂರ್ಣವಾಗಿ ಮುಕ್ತಾಯಗೊಳಿಸಲು ಮಾರ್ಚ್ 2020 ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಿದ್ದು, ಅಷ್ಟರಲ್ಲಿ ಕಾಮಗಾರಿ ಮುಕ್ತಾಯವಾಗದಿದ್ದಲ್ಲಿ, ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ , ಒಪ್ಪಂದದಲ್ಲಿ ಇರುವಂತೆ ಅವರು ಟೋಲ್ ಸಂಗ್ರಹಿಸುವ ಅರ್ಹತೆಯನ್ನು ಕಳೆದುಕೊಳ್ಳುತ್ತಾರೆ ಎಂದು ಡಿಸಿ ಹೇಳಿದರು.

ಉಡುಪಿ ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ, ಕಟ್ಟಡ ನಿರ್ಮಿಸುವ ಸಮಯದಲ್ಲಿ ಪಾರ್ಕಿಂಗ್ ಗಾಗಿ ಸಲ್ಲಾರ್ ನಿಗಧಿಪಡಿಸಿದ್ದು, ಅದನ್ನು ಪಾರ್ಕಿಂಗ್ ಉದ್ದೇಶಕ್ಕೇ ಮಾತ್ರವೇ ಬಳಸಬೇಕು, ಅದನ್ನು ಪರಿವರ್ತನೆ ಮಾಡಿ ಬೇರೆ ಉದ್ದೇಶಕ್ಕೆ ಬಳಸಿದ್ದಲ್ಲಿ ಅದನ್ನು ತೆರವುಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ಕಟ್ಟುನಿಟ್ಟಿನ ಪಾಲನೆ ಕುರಿತಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪಡುಬಿದ್ರಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ, ಕಾರ್ಕಳ ಪಟ್ಟಣದ ಅಭಿವೃದ್ದಿ ಸೇರಿದಂತೆ , ಪತ್ರಕರ್ತರು ತಿಳಿಸಿದ ಎಲ್ಲಾ ಸಮಸ್ಯೆಗಳ ಕುರಿತು ಆಲಿಸಿದ ಜಿಲ್ಲಾಧಿಕಾರಿ ಜಗದೀಶ್ , ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Facebook Comments

comments