DAKSHINA KANNADA
ಮರ್ಧಾಳ ಮಸೀದಿ ಕಂಪೌಡ್ ಒಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದ ಓರ್ವ ಅರೆಸ್ಟ್

ಪುತ್ತೂರು, ಸೆಪ್ಟೆಂಬರ್ 25: ಕಡಬದ ಮರ್ಧಾಳ ಮಸೀದಿ ಕೌಂಪೌಂಡ್ ಒಳನುಗ್ಗಿ ಜೈಶ್ರೀರಾಮ್ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಎಂದು ಗುರುತಿಸಲಾಗಿದೆ. ಇನ್ನೋರ್ವ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದಾನೆ.
ರಾತ್ರಿ 11 ಗಂಟೆ ಸಮಯ ಬೈಕ್ ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಂಪೌಂಡ್ ಒಳಗೆ ನುಗ್ಗಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿಟಿವಿ ಕ್ಯಾಮಾರದಲ್ಲಿ ಇಬ್ಬರು ಕಿಡಿಗೇಡಿಗಳು ಒಳನುಗ್ಗಿ ಹೋಗುತ್ತಿರುವ ದೃಶ್ಯ ಸೆರೆಯಾಗಿದ್ದು.

ಬೈಕ್ ನಲ್ಲಿದ್ದವರು ಮಸೀದಿಯ ಧರ್ಮಗುರುಗಳನ್ನ ನೋಡಿ ತಕ್ಷಣ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗದ 24 ಗಂಟೆಯೊಳಗೆ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿರುವ ಇನ್ನೋರ್ವ ಆರೋಪಿಯ ಪತ್ತೆಗೆ ಕಡಬ ಪೊಲೀಸರು ಬಲೆ ಬೀಸಿದ್ದಾರೆ.