LATEST NEWS
ಲಾಕ್ ಡೌನ್ ನಡುವೆ ಮದುವೆ… ಮೊದಲ ರಾತ್ರಿಯೇ ಹೋಂ ಕ್ವಾರಂಟೈನ್
ಲಾಕ್ ಡೌನ್ ನಡುವೆ ಮದುವೆ ಮೊದಲ ರಾತ್ರಿಯೇ ಹೋಂ ಕ್ವಾರಂಟೈನ್
ಉಡುಪಿ: ಕೊರೊನಾ ಲಾಕ್ ಡೌನ್ ನಡುವೆ ಮದುವೆಯಾದ ನವವಿವಾಹಿತ ಜೋಡಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಹನಿಮೂನ್ ಕನಸು ಹೊತ್ತ ಮದುಮಗ ಈಗ ನಾಲ್ಕು ಗೋಡೆಯ ನಡುವೆ ಲಾಕ್ ಆಗಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.
ಮಂಗಳೂರನಲ್ಲಿ ಖಾಸಗಿ ಉದ್ಯೋಗಿಯಾಗಿರುವ ಮದುಮಗ, ಕಾಪು ತಾಲೂಕು ಕುತ್ಯಾರಿನಲ್ಲಿ ಮದುವೆಯಾಗಿದ್ದರು. ಉಡುಪಿ ಜಿಲ್ಲಾ ಗಡಿ ಸಂಪೂರ್ಣ ಬಂದ್ ಆಗಿದ್ದರೂ ಒಳದಾರಿಯಿಂದ ಪಕ್ಕದ ದಕ್ಷಿಣಕನ್ನಡ ಜಿಲ್ಲೆಯ ಸಂಬಂಧಿಕರು ಈ ಮದುವೆ ಆಗಮಿಸಿದ್ದರು. ಕಾರ್ಕಳದ ಬೋಳ ಗ್ರಾಮದ ನವ ವಿವಾಹಿತ ಮತ್ತು ಮದುವೆಯಲ್ಲಿ ಭಾಗವಹಿಸಿದ್ದ 26ಮಂದಿಗೆ ಹೋಂ ಕ್ವಾರಂಟೈನ್‍ಗೆ ಹಾಕಲಾಗಿದೆ.
ಉಡುಪಿಯಿಂದ ದಕ್ಷಿಣ ಕನ್ನಡಕ್ಕೆ ಹೋಗಿ ಬಂದವರನ್ನು ಕ್ವಾರಂಟೈನ್ ಮಾಡಿರುವ ಆರೋಗ್ಯ ಇಲಾಖೆ, ಕಾರ್ಕಳಕ್ಕೆ ಆಗಮಿಸಿದ ಹೊರ ಜಿಲ್ಲೆಯ ಜನರಿಗೂ ಕ್ವಾರಂಟೈನ್ ಮಾಡಿದ್ದಾರೆ. ಮದುವೆಯ ಮೊದಲ ರಾತ್ರಿಯೇ ಹೋಮ್ ಕ್ವಾರಂಟೈನ್ ಹಾಕಿದ್ದು, ನವಜೋಡಿಗೆ ನಿರಾಶೆಯಾಗಿದೆ.