KARNATAKA
ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ: ಪಕ್ಷೇತರ ಅಭ್ಯರ್ಥಿಯ ಭರವಸೆ!
ಬೆಂಗಳೂರು, ಮೇ 05: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ.
ಈ ನಡುವೆ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತನ್ನ ಪ್ರಣಾಳಿಕೆಯಲ್ಲಿ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ.
”ಅರಭಾವಿ ಕ್ಷೇತ್ರದ ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸಲಾಗುವುದು. ವಧು-ವರರ ಮದುವೆ ಭಾಗ್ಯ ಯೋಜನೆ 2023 ಗ್ಯಾರಂಟಿ 100” ಎಂದು ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.