KARNATAKA
ಅರ್ಧ ಕೆಜಿ ಚಿನ್ನ, 50 ಲಕ್ಷ ಕೊಟ್ಟು ಮದ್ವೆ ಮಾಡಿಸಿದ್ರೂ ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಜೀವತೆತ್ತಳಾ ಕಾವ್ಯ..!?
ಬೆಂಗಳೂರು : 2 ವರ್ಷಗಳ ಹಿಂದೆಯಷ್ಟೇ ಅರ್ಧ ಕೆಜಿ ಚಿನ್ನ, 50 ಲಕ್ಷ ಕೊಟ್ಟು ಮದುವೆಯಾದ್ರೂ ಗೃಹಿಣಿಯೋರ್ವಳು ಒಂದು ವರ್ಷದ ಮುದ್ದಾದ ಮಗುವನ್ನು ಬಿಟ್ಟು ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.
ಬೆಂಗಳೂರಿನ ರಾಜಗೋಪಾಲನಗರದಲ್ಲಿ ಈ ಘಟನೆ ನಡೆದಿದ್ದು ಕಾವ್ಯ(22) ನೇಣಿಗೆ ಶರಣಾಗಿರುವ ಗೃಹಿಣಿಯಾಗಿದ್ದಾಳೆ. ಮೂಲತಃ ತುಮಕೂರಿನ ಕುಣಿಗಲ್ ನಿವಾಸಿಯಾಗಿರುವ ಕಾವ್ಯ ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಪ್ರವೀಣ್ ಎಂಬಾತನೊಂದಿಗೆ ಮದುವೆ ಮಾಡಿಕೊಟ್ಟಿದ್ದ ಪೋಷಕರು. ಪತಿ-ಪತ್ನಿ ರಾಜಗೋಪಾಲನಗರದ ಮೋಹನ್ ಥಿಯೇಟರ್ ಸಮೀಪದ ಮನೆಯಲ್ಲಿದ್ದರು. ದಾಂಪತ್ಯಕ್ಕೆ ಒಂದು ಮುದ್ದಾದ ಮಗುವಿದ್ದರೂ ಒಂದು ವರ್ಷದ ಮಗುವನ್ನು ಬಿಟ್ಟು ಕಾವ್ಯ ನೇಣಿಗೆ ಶರಣಾಗಿ ಜೀವಾಂತ್ಯ ಮಾಡಿಕೊಂಡಿದ್ದಾಳೆ. ಎರಡು ವರ್ಷದ ಹಿಂದೆ ಅರ್ಧಕೆಜಿ ಚಿನ್ನಕೊಟ್ಟು, 50 ಲಕ್ಷ ಖರ್ಚು ಮಾಡಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದೆವು. ಇತ್ತಿಚೇಗೆ ಮೊಮ್ಮಗನ ಹುಟ್ಟುಹಬ್ಬ ನಡೆದಿತ್ತು. ಮೃತ ಕಾವ್ಯಳ ಪತಿ ಪ್ರವೀಣ್, ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದ. ಆದರೆ ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಆದರೆ ಅಳಿಯನ ಜೊತೆ ಹುಡುಗಿಯೊಬ್ಬಳ ಅಕ್ರಮ ಸಂಬಂಧವಿತ್ತು. ಹೆಂಡತಿ, ಮಗುವಿಗಿಂತ ಅವಳೇ ಅಳಿಯನಿಗೆ ಹೆಚ್ಚಾಗಿದ್ದಳು. ಈ ಬಗ್ಗೆ ಪ್ರಶ್ನೆ ಮಾಡಿದರೆ ತಂಗಿ ಎಂದು ಹೇಳಿದ್ದ. ಕುಟುಂಬಸ್ಥರೇ ಮೃತದೇಹವನ್ನು ಕೆಳಗಿಳಿಸಿದ್ದಾರೆ ಎಂದು ಕಾವ್ಯಳ ಪೋಷಕರು ಆರೋಪಿಸಿದ್ದಾರೆ. ಮೃತ ಕಾವ್ಯಳ ಪತಿ, ಅತ್ತೆ, ಮಾವರನ್ನ ಪೊಲೀಸರು ವಶಕ್ಕೆ ಪಡೆದಿದ್ದು, ರಾಜಗೋಪಾಲನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login