Connect with us

    FILM

    ಮಾಸ್ ಮಹಾರಾಜ ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ: ದಸರಾಗೆ ಬಾಕ್ಸಾಫೀಸ್ ಬೇಟೆಗಿಳಿದ ‘ಟೈಗರ್ ನಾಗೇಶ್ವರ್ ರಾವ್’

    ತೆಲುಗು ಚಿತ್ರರಂಗದ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಬಿಡುಗಡೆ ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿದಿದ್ದಾನೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಚಿತ್ರ ರಿಲೀಸ್ ಮಾಡಲಾಗ್ತಿದೆ.

    ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಸಿನಿಮಾ ಮೂಡಿಬಂದಿದ್ದು, ಅದಕ್ಕಾಗಿ ಐದು ಎಕರೆ ಜಾಗದಲ್ಲಿ ಹಳ್ಳಿಯೊಂದನ್ನು ರೀ ಕ್ರಿಯೇಟ್ ಮಾಡಿ ಕೋಟ್ಯಾತರ ರೂಪಾಯಿ ಬಜೆಟ್ ನಲ್ಲಿ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ.

    70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply