LATEST NEWS
ಮಸಾಜ್ ಸೆಂಟರ್ ಮೇಲೆ ದಾಳಿ – ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಅರೆಸ್ಟ್
ಮಂಗಳೂರು ಜನವರಿ 23: ಬಿಜೈಯ ಕಲರ್ಸ್ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ದಾಂಧಲೆ ಮಾಡಿದ ಆರೋಪದ ಮೇಲೆ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ.
ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ. ಪ್ರಸಾದ್ ಅತ್ತವಾರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಮ್ಮ ಸಂಘಟನೆಯ ಕಾರ್ಯಕರ್ತರು ಮಸಾಜ್ ಸೆಂಟರ್‌ಗೆ ನುಗ್ಗಿರುವುದಾಗಿ ಪ್ರಸಾದ್ ಅತ್ತಾವರ ಒಪ್ಪಿಕೊಂಡಿರುವುದು ವರದಿಯಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದ ಮೇಲೆ ರಾಮ ಸೇನಾ ಕಾರ್ಯಕರ್ತರು ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ ಅಲ್ಲಿನ ಪಿಠೋಪಕರಣಗಳನ್ನು ಧ್ವಂಸಗೊಳಿಸಿದ್ದರು.