LATEST NEWS
ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ 14 ಮಂದಿ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಮಂಗಳೂರು ಜನವರಿ 24: ಮಂಗಳೂರಿನ ಬಿಜೈ ನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ರಾಮ್ ಸೇನೆ ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.
ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ಗೆ ರಾಮ ಸೇನಾ ಕಾರ್ಯಕರ್ತರು ನಿನ್ನೆ ಏಕಾಏಕಿ ನುಗ್ಗಿ ದಾಳಿ ಮಾಡಿದ್ದರು. ಪಾರ್ಲರ್ನಲ್ಲಿ ಅನೈತಿಕ ಚಟುವಟಿಕೆಯ ಆರೋಪಿಸಿ ದಾಳಿ ಮಾಡಿದ್ದರು. ಪಾರ್ಲರ್ನ ಪೀಠೋಪಕರಣ, ಕನ್ನಡಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಪುಡಿ ಗೈದು ದಾಂಧಲೆ ಎಸಗಿದ್ದರು.
ಈ ಘಟನೆ ಕುರಿತಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಪೊಲೀಸರು ರಾಮಸೇನ್ ಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದರು, ಇಂದು ಅವರನ್ನು ಬರ್ಕೆ ಠಾಣೆ ಪೊಲೀಸರು ಇಂದು ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಿದ್ದರು. ಕೋರ್ಟ್ ಪ್ರಸಾದ್ ಅತ್ತಾವರ ಸೇರಿದಂತೆ 14 ಆರೋಪಿಗಳಿಗೆ 14 ದಿನ ನ್ಯಾಯಾಂಗ (ಫೆಬ್ರವರಿ 7ರವರೆಗೆ) ಬಂಧನ ವಿಧಿಸಿದ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.