LATEST NEWS
ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲ ಸಿಲಿಂಡರ್ ಸ್ಪೋಟ – ಬೆಂಕಿಗಾಹುತಿಯಾದ ಟೆಂಟ್
ಪ್ರಯಾಗ್ ರಾಜ್ ಜನವರಿ 19: ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಟೆಂಟ್ ಗಳು ಬೆಂಕಿಗಾಹುತಿಯಾದ ಘಟನೆ ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ನಡೆದಿದೆ.
ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್ಗಳಿಗೆ ಬೆಂಕಿ ಹತ್ತಿಕೊಂಡಿದೆ. ಟೆಂಟ್ಗಳಲ್ಲಿ ಇಟ್ಟಿದ್ದ ಸಿಲಿಂಡರ್ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿರುವುದರಿಂದ ಬೆಂಕಿ ತೀವ್ರತೆ ಹೆಚ್ಚಾಗುತ್ತಿದೆ. ಬೆಂಕಿ ಅವಘಡದಿಂದಾಗಿ ಮಹಾ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಸದ್ಯ ಸ್ಥಳಕ್ಕಾಗಮಿಸಿದ 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದೆ. ಅಗ್ನಿ ಅವಘಡದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದುಕೊಂಡಿದ್ದಾರೆ.