Connect with us

LATEST NEWS

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ದಕ್ಷಿಣಕನ್ನಡ ಜಿಲ್ಲೆ ತಾಲೂಕು ಕಬ್ಬಡ್ಡಿ ಅಸೋಸಿಯೇಶನ್ ಗಳಿಗೆ ಮ್ಯಾಟ್ ವಿತರಣೆ

ಬಂಟ್ವಾಳ ಎಪ್ರಿಲ್ 13: ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್.ಎಂ.ಪಿ.ಎಯ ಸಿ.ಎಸ್.ಆರ್. ನಿಧಿಯಡಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳ ಕಬ್ಬಡ್ಡಿ ಅಸೋಸಿಯೇಶನ್ ಕಬ್ಬಡ್ದಿ ಮ್ಯಾಟ್ ವಿತರಣಾ ಕಾರ್ಯಕ್ರಮ ನಡೆಯಿತು.


ಹನುಮ ಜಯಂತಿ ಪ್ರಯುಕ್ತ ಕ್ರೀಡಾಭಾರತಿ ಮತ್ತು ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ಕಬ್ಬಡ್ಡಿ ಅಸೋಸಿಯೇಶನ್ ಗಳಿಗೆ ಮ್ಯಾಟ್ ಗಳನ್ನು ಹಸ್ತಾಂತರ ಮಾಡಿದರು.


ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ದೇಶದಲ್ಲಿ ಕಳೆದ ಹತ್ತು ವರ್ಷದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕ್ರೀಡಾಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆ ತಂದಿದೆ. ಗ್ರಾಮೀಣ ಭಾಗದ ನೂರಾರು ಕ್ರೀಡಾಪಟುಗಳಿಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸುವುದಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ, ಅವಕಾಶಗಳನ್ನು ಕಲ್ಪಿಸುವಲ್ಲಿ ಮೋದಿ ಸರ್ಕಾರ ಮಹತ್ತರ ಹೆಜ್ಜೆ ಇರಿಸಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತದಲ್ಲಿ ಕ್ರೀಡೆಯನ್ನು ನೋಡುವ ದೃಷ್ಟಿ ಬದಲಾಗಿದೆ. ಖೇಲೋ ಇಂಡಿಯಾ ಮೂಲಕ ಕ್ರೀಡಾಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಮೂಲಸೌಕರ್ಯವನ್ನು ಒದಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ದೇಶದಲ್ಲಿ ಕ್ರೀಡಾಕ್ರಾಂತಿ ನಡೆಯುತ್ತಿದ್ದು, ಕ್ರೀಡಾಪಟುಗಳನ್ನು ತಯಾರು ಮಾಡುವ ಕೆಲಸ ಮೂಲದಿಂದಲೇ ನಡೆಯಬೇಕು ಎಂಬ ದೃಷ್ಟಿಯಿಂದ ತಾಲೂಕುಗಳಲ್ಲಿ ಕ್ರಿಡಾಂಗಣವೇ ಮೊದಲಾದ ವ್ಯವಸ್ಥೆಗಳನ್ನು ಕಲ್ಪಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮುಂದಾಗಿದೆ.

ಒಲಂಪಿಕ್ಸ್ ನಲ್ಲಿ ಕಬಡ್ಡಿ ಸೇರ್ಪಡೆಯಾದರೆ ಭಾರತಕ್ಕೆ ಉತ್ತಮ ಅವಕಾಶವಿದ್ದು, ಅದಕ್ಕೆ ನಮ್ಮೂರಿನ ಕ್ರೀಡಾಪಟುಗಳು ತಯಾರಾಗಬೇಕು ಎಂಬ ಹಿನ್ನೆಲೆಯಲ್ಲಿ ನೆರವು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಕಬ್ಬಡಿ ತಂಡಗಳು ಹಾಗೂ ಕ್ರೀಡಾಸ್ತಕ ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ನೆರವು ನೀಡಿದ ನವಮಂಗಳೂರು ಬಂದರು ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಅವರು, ಕ್ರೀಡಾಪಟುಗಳಿಗೆ ಬಂದರು ಮಂಡಳಿ ಸಹಿತ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ನೀಡಬೇಕು ಎಂದು ಇದೇ ವೇಳೆ ಕೋರಿಕೊಂಡರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *