LATEST NEWS
ಮತ್ಸ್ಯಗಂಧ ರೈಲಿಗೆ ಹೊಸ ಕೋಚ್ ಎಂದು ಹಳೆ ಕೋಚ್ ಆಳವಡಿಸಿದ ರೈಲ್ವೆ ಇಲಾಖೆ – ಸಚಿವ ಸೋಮಣ್ಣರಿಗೆ ದೂರು ನೀಡಿದ ಕೋಟ

ಉಡುಪಿ ಮಾರ್ಚ್ 12: ಸುಮಾರು 25 ವರ್ಷಗಳ ಬಳಿಕ ಮುಂಬೈ ಮತ್ತು ಕರಾವಳಿ ಜನರ ಜೀವನಾಡಿಯಾಗಿರುವ ಮತ್ಯಗಂಧ ಎಕ್ಸ್ ಪ್ರೇಸ್ ರೈಲಿಗೆ ನೂತನ ಕೋಚ್ ಬರಲಿದೆ ಎಂದು ಸಂತೋಷದಲ್ಲಿದ್ದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಶಾಖ್ ನೀಡಿದೆ. ಹಳೆಯ ಕೋಚ್ ಗಳನ್ನು ತೆಗೆದು 2020ರಲ್ಲಿ ತಯಾರಾದ ಹಳೆಯ LHB ಕೋಚ್ ಗಳನ್ನು ರೈಲ್ವೆ ಇಲಾಖೆ ಆಳವಡಿಸಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆ ಸಂಸದ ಕೋಟ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮತ್ಯಗಂಧ ಎಕ್ಸ್ ಪ್ರೇಸ್ ರೈಲಿಗೆ ಹಳೆಯ ಕೋಚ್ ಗಳನ್ನು ತೆಗೆದು ಹೊಸ ನೂತನ ಕೋಚ್ ಆಳವಡಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿತ್ತು, ಆದರೆ ಬದಲಾದ ಹೊಸ ಕೋಚ್ ಗಳನ್ನು ನೋಡಿ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳನ್ನು ಮಾಡಿ ಹರಿಯ ಬಿಟ್ಟಿದ್ದರು. ಈ ಹಿನ್ನಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್ ಗಳ ಜೊತೆಗೆ 2020 ರಲ್ಲಿ ತಯಾರಾದ ಹಳೆಯ LHB ಕೋಚ್ ಗಳನ್ನು ಸೇರಿಸಿದ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ.

ಮತ್ಸ್ಯಗಂಧ ರೈಲಿನ ಎಲ್ಲಾ ಟ್ರಿಪ್ ಗಳಿಗೂ ದೂರುಗಳು ಬಾರದಂತೆ ಉತ್ತಮ 2024 ರ ಕೋಚ್ ಗಳನ್ನೇ ಬಳಸುವಂತೆ ಸಂಬಂಧಿಸಿದ ಝೋನಲ್ ರೈಲ್ವೇಗಳಿಗೆ ತಿಳಿಸಲು ಕೋರಿದ್ದು, ಸಚಿವರಿಂದ ಈ ಬಗ್ಗೆ ಸಕಾರತ್ಮಕ ಪ್ರತಿಕ್ರಿಯೆ ಲಭಿಸಿದೆ. ಕರಾವಳಿ ಹಾಗೂ ಮುಂಬೈ ಬೆಸೆಯುವ ಪ್ರತಿಷ್ಟಿತ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ಇದೀಗ LHB ಕೋಚುಗಳೊಂದಿಗೆ ಕಳೆದ ಪೆಬ್ರವರಿ 17 ರಿಂದ ಮೇಲ್ದರ್ಜೆಗೇರಿದ್ದು ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣದ ಭರವಸೆ ನೀಡಿದೆ.
ಆದರೆ ಮತ್ಸ್ಯಗಂಧ ರೈಲಿನ ಎರಡೂ ರೇಕುಗಳ ಜತೆ ಮಂಗಳೂರು ಮತ್ತು ಕೇರಳದ ತಿರುವನಂತಪುರಂ ನಡುವೆ ಓಡುವ ಇನ್ನೊಂದು ರೈಲಿನ ರೇಕುಗಳ ಹೊಂದಾಣಿಕೆ ವ್ಯವಸ್ತೆ ಇದ್ದು, ಈ ರೈಲಿನ ಎರಡು ರೇಕೂಗಳೂ ಸೇರಿ 2024ರ ಎರಡು ಹೊಸ ರೇಕುಗಳ ಜತೆ ಮತ್ತೆರಡು 2020 ರ ಹಳೇ ರೇಕುಗಳೂ ಸೇರಿಕೊಂಡ ಕಾರಣ, ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಕೆಲವು ಟ್ರಿಪ್ ಗಳಲ್ಲಿ ಹಳೆಯ LHB ರೇಕುಗಳು ಸೇರುವುದು ಗಮನಕ್ಕೆ ಬಂದಿದ್ದು; ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಕೋಚುಗಳ ಸಮಸ್ಯೆಗಳ ಬಗ್ಗೆ ಬಂದ ದೂರುಗಳು ನಮಗೆ ತಲುಪಿತ್ತು. ಈಗಾಗಲೇ ಅಧಿಕಾರಿಗಳಿಗೆ ಸಮಸ್ಯೆ ಪರಿಹಾರಕ್ಕೆ ತಿಳಿಸಿದ್ದು ಜತೆಗೆ ಈ ಬಗ್ಗೆ ಸಮಸ್ಯೆ ಪರಿಹಾರಕ್ಕೆ ಸಚಿವರನ್ನು ಭೇಟಿಯಾಗಿದ್ದೇನೆ.
ಮಂಗಳೂರು ಮುಂಬಯಿ ನಡುವೆ ಓಡುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಉತ್ತಮ ಕೋಚುಗಳನ್ನಷ್ಟೇ ಜೋಡಿಸಲು ತಿಳಿಸಿದ್ದು , ಹಳೆಯ ಕೋಚುಗಳನ್ನು ಅಳವಡಿಸುವ ಪದ್ದತಿಗೆ ಮತ್ತು ಹೊಸ ಹಾಗು ಹಳೇ ಕೋಚುಗಳ ಮಿಶ್ರಣ ಮಾಡಿ ಓಡಿಸುವ ಪದ್ದತಿಯನ್ನು ಅನುಸರಿಸದಂತೆ ಸಚಿವರಿಗೆ ಮನವಿ ಮಾಡಿದ್ದು, ಸಚಿವರು ಈ ಬಗ್ಗೆ ಮತ್ಸ್ಯಗಂಧ ರೈಲಿನ ಮೂಲ ವಲಯವಾದ ದಕ್ಷಿಣ ರೈಲ್ವೇಗೆ ತಕ್ಷಣವೇ ಸಮಸ್ಯೆ ಪರಿಹರಿಸಲು ಸೂಚನೆ ನೀಡಿರುತ್ತಾರೆ. ನಮ್ಮ ಮನವಿಗೆ ಕೂಡಲೇ ಸ್ಪಂದಿಸಿದ ಗೌರವಾನ್ವಿತ ಸಚಿವರಿಗೆ ಧನ್ಯವಾದಗಳು.