UDUPI
ಪೇಜಾವರ ಶ್ರೀಗಳಿಗೆ ಅರಳು ಮರಳು ಹೇಳಿಕೆ ಇಡೀ ಹಿಂದೂ ಸಮಾಜಕ್ಕೆ ನೋವು ತಂದಿದೆ – ಕೋಟ ಶ್ರೀನಿವಾಸ ಪೂಜಾರಿ
ಪೇಜಾವರ ಶ್ರೀಗಳಿಗೆ ಅರಳು ಮರಳು ಹೇಳಿಕೆ ಇಡೀ ಹಿಂದೂ ಸಮಾಜಕ್ಕೆ ನೋವು ತಂದಿದೆ – ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ಡಿಸೆಂಬರ್ 24: ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಪೇಜಾವರ ಶ್ರೀಗಳಿಗೆ ಅರಳು ಮರಳು ಎಂದು ಹೇಳಿರುವುದು ಇಡೀ ಹಿಂದೂ ಸಮಾಜಕ್ಕೆ ನೋವು ತಂದಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಬಾನುವಾರ ಆಯೋಜಿಸಲಾಗಿದ್ದ ಅಂಬೇಡ್ಕರ್ ಯುವಜನೋತ್ಸವದಲ್ಲಿ ದಿನೇಶ ಅಮಿನ್ ಮಟ್ಟು ಈ ರೀತಿಯ ವಿವಾದಾಸ್ಪದ ಹೇಳಿಕೆ ನೀಡಿದ್ದರು .
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅಖಂಡ ಹಿಂದೂ ಧರ್ಮದ ಶ್ರೇಷ್ಠ ಸನ್ಯಾಸಿ, ದೀಕ್ಷೆ ಸ್ವೀಕರಿಸಿ 80 ವರ್ಷಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಸ್ವತಃ ರಾಷ್ಟ್ರಪತಿಗಳೇ ಉಡುಪಿಗೆ ಬಂದು ಗೌರವಿಸುತ್ತಿದ್ದಾರೆ. ಇದು ದೇಶದ ಕಾರ್ಯಕ್ರಮವಾಗಿದೆ. ಇಂತಹ ಸಂದರ್ಭದಲ್ಲಿ ದಿನೇಶ್ ಅಮೀನ್ ಮಟ್ಟು ಅವರು ನೀಡಿರುವ ಹೇಳಿಕೆಯಿಂದ ಇಡೀ ಹಿಂದೂ ಧರ್ಮಕ್ಕೆ ನೋವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಬಹುಶಃ ಇಡೀ ದೇಶದ ಪೊಲೀಸ್ ವ್ಯವಸ್ಥೆಯನ್ನು 15 ನಿಮಿಷಗಳ ಕಾಲ ಸ್ಥಗಿತಗೊಳಿಸಿ, ಇಡೀ ಹಿಂದೂ ಧರ್ಮವನ್ನೇ ಮುಗಿಸುತ್ತೇನೆ ಎಂದ ಅಸಾದುದ್ದೀನ್ ಒವೈಸಿ ಅಂತಹವರು ದಿನೇಶ್ ಅಮೀನ್ ಮಟ್ಟು ಅವರಿಗೆ ಬಹಳ ದೊಡ್ಡ ವ್ಯಕ್ತಿಯಾಗಿರಬೇಕು. ಆದ್ದರಿಂದ ಈ ರೀತಿ ಮಾತನಾಡುತ್ತಿದ್ದಾರೆ’ ಎಂದು ಕೋಟ ಟೀಕಿಸಿದರು.
Facebook Comments
You may like
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಉಡುಪಿಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ
ಟೈಂ ಕೀಪಿಂಗ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ಹೊಡೆದಾಟ – ಬಸ್ ವಶಕ್ಕೆ
ಸಾಸ್ತಾನ ಟೋಲ್ ವಿನಾಯಿತಿ ನೀಡಲು ಒಪ್ಪದ ನವಯುಗ ಸಂಸ್ಥೆ – ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ
ನನ್ನ ಹೆಸರಲ್ಲೇ ರಾಮನಿದ್ದಾನೆ..ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೆನೆ – ಸಿದ್ದರಾಮಯ್ಯ
ಸಾಸ್ತಾನ ನವಯುಗ ಟೋಲ್ ಗೇಟ್ ವಿರುದ್ದ ಸ್ಥಳೀಯರ ಬೃಹತ್ ಪ್ರತಿಭಟನಾ ಸಭೆ
You must be logged in to post a comment Login