LATEST NEWS
ವಿದೇಶದಿಂದ ಬರುವ 177 ಪ್ರಯಾಣಿಕರು ನೇರ ಸರಕಾರಿ ಕ್ವಾರಂಟೈನ್ ಗೆ
ವಿದೇಶದಿಂದ ಬರುವ 177 ಪ್ರಯಾಣಿಕರು ನೇರ ಸರಕಾರಿ ಕ್ವಾರಂಟೈನ್ ಗೆ
ಮಂಗಳೂರು, ಮೇ 11: ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು ಮೇ 12 ರಂದು ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐ.ಎ.ಎಸ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.
ವಿದೇಶದಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.
ಯು.ಎ.ಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. ಅವರನ್ನು 17 ಹೋಟೆಲ್‍ಗಳು ಹಾಗೂ 12 ಹಾಸ್ಟೆಲ್ ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಆಗಮಿಸುವ ಪ್ರಯಾಣಿಕರಲ್ಲಿ ಎ ಮತ್ತು ಬಿ ಎಂದು 2 ವಿಭಾಗ ಮಾಡಲಾಗುವುದು. ಕೆಮ್ಮು, ಜ್ವರ, ನೆಗಡಿ ಇರುವವರು ಎ ವಿಭಾಗದ ಪ್ರಯಾಣಿಕರು. ಇವರಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 14 ದಿನಗಳವರೆಗೆ ಕ್ವಾರಂಟೈನ್ ಮಾಡಿ ಬೇಕಾಗುವ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದರು.
ಬಿ ವಿಭಾಗ ಎಂದರೆ ಯಾವುದೇ ರೋಗ ಲಕ್ಷಣ ಇಲ್ಲದವರು ಅಂತವರನ್ನು ಹೋಟೆಲ್/ಹಾಸ್ಟೆಲ್ ಕ್ವಾರೆಂಟೈನ್‍ನಲ್ಲಿ ಇರಿಸಲಾಗುವುದು. ವಿಮಾನ ನಿಲ್ದಾಣದಲ್ಲೇ ಹೋಟೆಲ್‍ಗಳನ್ನು ಗುರುತಿಸಲು ಏರ್ ಪೋರ್ಟ್‍ನಲ್ಲೇ ಆನ್‍ಲೈನ್ ಬುಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಪ್ರಯಾಣಿಕರು ಗುರುತಿಸಿರುವ ಹೋಟೆಲ್‍ಗಳಿಗೆ ತಲುಪಿಸಲು ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.