LATEST NEWS
ಮೇ 7 ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ : ಮೋದಿ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರ
ಮೇ 7 ಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ : ಮೋದಿ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರ
ಮಂಗಳೂರು, ಎಪ್ರಿಲ್ 17 : ಪ್ರಧಾನಿ ನರೇಂದ್ರ ಮೋದಿ ಅವರು ಮೇ 7 ರಂದು ಕರಾವಳಿಗೆ ಆಗಮಿಲಿದ್ದಾರೆ.
ಮಂಗಳೂರಿನಲ್ಲಿ ಅಂದು ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ರಾಲಿಗಳಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆಮಾಡಿದೆ.
ಕಾಂಗ್ರೆಸ್ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಒಂದೇ ಹಂತದಲ್ಲಿ ಘೋಷಣೆ ಮಾಡಿದ್ದಾರೆ.
ಬಿಜೆಪಿಯಲ್ಲಿ ಗೊಂದಲ ಸೃಷ್ಟಿಯಾಗಿದೆ.
ಆದರೆ ಬಿಜೆಪಿ ಈಗಾಗಲೇ ಎರಡು ಹಂತಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಿದ್ದು, ಮೂರನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಘೋಷಣೆ ಮಾಡಲಾಗಿದೆ.
ಮೂರು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಗೆ ಬಾಕಿ ಇದೆ. ಮೇ 12 ರಂದು ಚುನಾವಣೆ ನಡೆಯಲಿದ್ದು, ಅದಕ್ಕೆ 5 ದಿನ ಮುಂಚಿತವಾಗಿ ಪ್ರಧಾನಿ ಮೋದಿ ಅವರು ಜಿಲ್ಲೆಗೆ ಆಗಮಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮತದಾನ ದಿನಾಂಕಕ್ಕೆ ಕೇವಲ 5 ದಿನ ಬಾಕಿ ಇರುವಾಗ ಕರಾವಳಿಗೆ ಬಂದು ಚುನಾವಣಾ ಪ್ರಚಾರದಲ್ಲಿ ಸ್ಟಾರ್ ಪ್ರಚಾರಕರಾಗಿ ಮೋದಿ ಅವರು ಪಾಲ್ಗೊಳ್ಳುವ ಹಿಂದೆ ರಾಜಕೀಯ ಲೆಕ್ಕಾಚಾರ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.