Connect with us

LATEST NEWS

ಐಪಿಎಲ್ ನಿರೂಪಕರ ಲಿಸ್ಟ್ ನಲ್ಲಿಲ್ಲ ಮಾಯಂತಿ ಲ್ಯಾಂಗರ್

ನವದೆಹಲಿ : ಕ್ರಿಕೆಟ್ ನ ಸ್ಟಾರ್ ನಿರೂಪಕಿ , ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಪತ್ನಿ ಮಾಯಂತಿ ಲ್ಯಾಂಗರ್ ಈ ಬಾರಿಯ ಐಪಿಎಲ್ ಕ್ರಿಕೆಟ್ ನ ನಿರೂಪಕರ ಪಟ್ಟಿಯಿಂದ ಕೈಬಿಡಲಾಗಿದೆ. ದುಬೈನಲ್ಲಿ ನಾಳೆಯಲ್ಲಿ ಆರಂಭವಾಗಲಿರುವ ಐಪಿಎಲ್ ಹಬ್ಬದಲ್ಲಿ ಪಾಲ್ಗೊಳ್ಳಲಿರುವ ನಿರೂಪಕರ ಪಟ್ಟಿಯನ್ನು ಸ್ಟಾರ್ ಸ್ಪೋರ್ಟ್ ಬಿಡುಗಡೆ ಮಾಡಿದ್ದು, ಈ ಬಾರಿ ಮಾಯಂತಿ ಲ್ಯಾಂಗರ್ ಅವರ ಹೆಸರನ್ನು ಕೈಬಿಡಲಾಗಿದೆ.


ಕೊರೊನಾದಿಂದಾಗಿ 6 ತಿಂಗಳು ತಡವಾಗಿ ಐಪಿಎಲ್ ಆರಂಭವಾಗುತ್ತಿದೆ.ಐಪಿಎಲ್-2020 ಮೊದಲ ಪಂದ್ಯ ನಾಳೆ ಆರಂಭವಾಗಲಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಸಿರುವ ಸ್ಟಾರ್ ಸ್ಪೋರ್ಟ್ಸ್ ರಂಗುರಂಗಾಗಿ ಮಾತನಾಡುವ ನಿರೂಪಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಹಿಂದೆ ಐಪಿಎಲ್‍ನಲ್ಲಿ ನಿರೂಪಣೆ ಮಾಡುತ್ತಿದ್ದ ಸ್ಟಾರ್ ನಿರೂಪಕಿ ಮಾಯಂತಿ ಲ್ಯಾಂಗರ್ ಅವರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಅವರನ್ನು ಕೈಬಿಡಲು ಕಾರಣವೇನು ಎಂಬುದನ್ನು ಸ್ಟಾರ್ ಸ್ಪೋರ್ಟ್ಸ್ ತಿಳಿಸಿಲ್ಲ. ಇದರ ಬಗ್ಗೆ ಮಾಯಂತಿ ಲ್ಯಾಂಗರ್ ಕೂಡ ಇಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.


ಸುರೇನ್ ಸುಂದರಂ, ಕಿರಾ ನಾರಾಯಣನ್, ನಶ್ಪ್ರೀತ್ ಕೌರ್, ತಾನ್ಯಾ ಪುರೋಹಿತ್, ಧೀರಜ್ ಜುನೇಜಾ, ಜತಿನ್ ಸಪ್ರು, ಸುಹೇಲ್ ಚಂದೋಕ್, ಸಂಜನಾ ಗಣೇಶನ್, ಅನಂತ್ ತ್ಯಾಗಿ ಸೇರಿದಂತೆ 9 ಮಂದಿ ನಿರೂಪಕರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಕನ್ನಡದ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಮಂಗಳೂರಿನ ವೀಣಾ ಡಿಸೋಜಾ ನಿರೂಪಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಆದರೆ ಮಾಯಂತಿ ಲ್ಯಾಂಗರ್ ಕಾಣದಿರುವುದು ಕೆಲ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಮುಂಬರುವ ಐಪಿಎಲ್‍ಗಾಗಿ ಆಸ್ಟ್ರೇಲಿಯಾದ ಜನಪ್ರಿಯ ಟಿವಿ ನಿರೂಪಕ ನೆರೋಲಿ ಮೆಡೋಸ್ ಅವರನ್ನು ಕರೆತಂದಿದೆ. ಮಾಯಂತಿ ಲ್ಯಾಂಗರ್ ಅವರ ಅನುಪಸ್ಥಿತಿಯಲ್ಲಿ, ಈ ಬಾರಿಯ ಐಪಿಎಲ್‍ನಲ್ಲಿ ಹೊಸ ನಿರೂಪಕರ ತಂಡ ಕೆಲಸ ಮಾಡಲಿದೆ.

Facebook Comments

comments