Connect with us

  KARNATAKA

  ಮನೆಯಲ್ಲೇ ಗಾಂಜಾ ಕೃಷಿ ಮಾಡಿದ ಎಂಬಿಬಿಎಸ್ ವಿದ್ಯಾರ್ಥಿಗಳು…!!

  ಶಿವಮೊಗ್ಗ ಜೂನ್ 24 : ವೈದ್ಯಕೀಯ ವಿಧ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇದೀಗ ಶಿವಮೊಗ್ಗ ಪೊಲೀಸರು 5 ಮಂದಿ ಎಂಬಿಬಿಎಸ್ ವಿಧ್ಯಾರ್ಥಿಗಳನ್ನು ಬಂಧಿಸಿದ್ದಾರೆ.

  ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಅಬ್ದುಲ್ ಖಯ್ಯಂ, ಅರ್ಪಿತಾ, ವಿಘ್ನರಾಜ್, ವಿನೋದ್ ಕುಮಾರ್, ಪಾಂಡಿದೊರೈ ಬಂಧಿತ ಆರೋಪಿಗಳು. ಅಬ್ದುಲ್ ಖಯ್ಯಂ, ವಿಘ್ನರಾಜ್ ಹಾಗೂ ಅರ್ಪಿತಾ ಶಿವಮೊಗ್ಗದ ಶಿವಗಂಗಾ ಲೇಔಟ್ ನಲ್ಲಿ ವಾಸಕ್ಕೆ ಬಾಡಿಗೆ ಮನೆ ಪಡೆದಿದ್ದರು. ಅದೇ ಮನೆಯಲ್ಲೇ ಹೂ ಬೆಳೆಯುವ ಪಾಟ್‌ಗಳಲ್ಲಿ ಗಾಂಜಾ ಬೆಳೆದು, ಅದನ್ನು ಟೇಬಲ್‌ಫ್ಯಾನ್ (Table Fan) ಗಾಳಿಯಿಂದ ಒಣಗಿಸಿ, ಪ್ಯಾಕೆಟ್ ಮಾಡಿ ಮಾರಾಟ ಮಾಡುತ್ತಿದ್ದರು. ಇವರ ಬಳಿ ಗಾಂಜಾ ಕೊಳ್ಳಲು ಪಾಂಡಿದೊರೈ ಹಾಗೂ ವಿನೋದ್ ಕುಮಾರ್ ಹೋಗಿದ್ದರು.

  ಖಚಿತ ಮಾಹಿತಿ ಮೇರೆಗೆ ಶಿವಗಂಗಾ ಲೇಔಟ್ ನಿವಾಸದ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆರೋಪಿಗಳಿಂದ 6 ಸಾವಿರ ರೂ. ಮೌಲ್ಯದ ಹಸಿ ಗಾಂಜಾ, 20 ಸಾವಿರ ರೂ. ಮೌಲ್ಯದ ಒಣ ಗಾಂಜಾ, 30 ಸಾವಿರ ರೂ. ಮೌಲ್ಯದ ಚರಸ್, ಸೀರಿಂಜ್‌ಗಳು, ಹುಕ್ಕಾ ಕೊಳವೆ, 6 ಟೇಬಲ್ ಫ್ಯಾನ್ ಸೇರಿದಂತೆ ಇತರೆ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.

  Share Information
  Advertisement
  Click to comment

  You must be logged in to post a comment Login

  Leave a Reply