Connect with us

MANGALORE

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ

ಮಂಗಳೂರು ಜುಲೈ 12: ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಜ್ವರ ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರು ಕೋವಿಡ್ ತಪಾಸಣೆ ಮಾಡಿಸಿದ್ದರು. ಇಂದು ಅವರ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ ಸೊಂಕು ಹಿನ್ನಲೆ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡ ಮತ್ತೆ ಸೀಲ್ ಡೌನ್ ಆಗುವ ಸಾಧ್ಯತೆ ಇದೆ.

Facebook Comments

comments