LATEST NEWS
ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್. ಆನಂದ ವರ್ಗಾವಣೆ
ಮಂಗಳೂರು ಜನವರಿ 19: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಸಿ.ಎಲ್. ಆನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಪಾಲಿಕೆ ಆಯುಕ್ತರಾಗಿದ್ದ ಸಿ. ಎಲ್ ಆನಂದ ವಿರುದ್ದ ಪಾಲಿಕೆಯ ವಿಪಕ್ಷ ಸದಸ್ಯರು ಭ್ರಷ್ಟಾಚಾರದ ಆರೋಪ ಹೋರಿಸಿದ್ದರು, ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಕೂಡ ಬೆಂಬಲಿಸಿದ್ದರು. ಈ ನಡುವೆ ರಾಜ್ಯ ಸರಕಾರದ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇದೀಗ ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು ನೇಮಕಗೊಳಿಸಿದೆ.