Connect with us

    MANGALORE

    ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಶಿಲಾನ್ಯಾಸ

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 29ನೇ ಕಂಬ್ಳ ವಾರ್ಡ್‌ನ ಕುದ್ರೋಳಿ ಭಗವತಿ ದೇವಸ್ಥಾನ, ಕೊಡಿಯಾಲ್‌ಬೈಲ್ ನಾಗಬನ, ಪ್ರಗತಿ ಸರ್ವಿಸ್ ಸ್ಟೇಶನ್ ಬಳಿ ಎಂಪೈರ್ ಮಾಲ್ ಕಡೆ ಹೋಗುವ ಭಾಗದಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಇಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಭಾಗದ ನಿವಾಸಿ ಕೇಶವ ಆಚಾರ್ಯ ಅವರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.

    ಮನಪಾ ಉಪ ಮಹಾಪೌರರಾದ ಪೂರ್ಣಿಮಾ, ಸ್ಥಳೀಯ ಕಾರ್ಪೊರೇಟರ್ ಲೀಲಾವತಿ ಪ್ರಕಾಶ್, ಮುಖಂಡರಾದ ರಾಧಾಕೃಷ್ಣ ಶೆಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

     

    ಒಟ್ಟಾರೆ 1 ಕೋಟಿ 20 ಲಕ್ಷ ರೂ ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ. ಮಳೆಗಾಲದಲ್ಲಿ ಈ ಭಾಗದ ನಿವಾಸಿಗಳ ಕಷ್ಟ ನಷ್ಟಗಳನ್ನು ನಿವಾರಿಸಲು ತಡೆಗೋಡೆ ನಿರ್ಮಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಸಮಾಲೋಚಿಸಿ ನೀರಾವರಿ ಇಲಾಖೆಯಿಂದ 100 ಕೋಟಿ ರೂ ಅನುದಾನವನ್ನು ತಡೆಗೋಡೆ ಕಾಮಗಾರಿಗಳಿಗಾಗಿಯೇ ಒದಗಿಸಲಾಗಿದೆ. ಅದನ್ನು ಸದ್ಬಳಕೆ ಮಾಡಿಕೊಂಡು ನಗರದ ನಿವಾಸಿಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ನುಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply