LATEST NEWS
ಮಂಗಳೂರು ಮಹಾನಗರಪಾಲಿಕೆ ಚುನಾವಣೆಗೆ 12 ಮಂದಿ ಚುನಾವಣಾಧಿಕಾರಿಗಳ ನೇಮಕ
ಮಂಗಳೂರು ಮಹಾನಗರಪಾಲಿಕೆ ಚುನಾವಣೆಗೆ 12 ಮಂದಿ ಚುನಾವಣಾಧಿಕಾರಿಗಳ ನೇಮಕ
ಮಂಗಳೂರು ಅ.21: ನವೆಂಬರ್ 12ರಂದು ನಡೆಯಲಿರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ತಲಾ 12 ಮಂದಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.
ಮಹಾನಗರ ಪಾಲಿಕೆಯ 60 ವಾರ್ಡ್ಗಳಿಗೆ ಚುನಾವಣೆ ನಡೆಯಲಿದೆ. ಪ್ರತಿ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗೆ ತಲಾ ಐದು ವಾರ್ಡ್ಗಳ ಜವಾಬ್ದಾರಿಯನ್ನು ನೀಡಲಾಗಿದೆ. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿ ಈ ನೇಮಕಾತಿ ಮಾಡಿದ್ದಾರೆ. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಹೊಣೆ ನೀಡಲಾಗಿದೆ.