LATEST NEWS
ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಮತ ಚಲಾಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಮತ ಚಲಾಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು ನ.12: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ ಮತದಾನ ಪ್ರಕ್ರಿಯೆಯು ಬಿರುಸಿನಿಂದ ನಡೆಯುತ್ತಿದೆ. ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ತಮ್ಮ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಗೆ ತೆರಳಿ ಮತದಾನ ಮಾಡಿದರು. ಮತದಾನದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಳಿನ್ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಕಾಂಗ್ರೆಸ್‍ನಲ್ಲಿ ಒಳಜಗಳ ನಡೆದಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ. ಹಾಗಾಗಿ ಈ ಬಾರಿ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಬಿರುಸಿನಿಂದ ಸಾಗಿದ್ದು, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಬೆಳಗ್ಗೆಯೇ ಮತಗಟ್ಟೆಗೆ ಧಾವಿಸಿ, ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಆದರೆ ಮತದಾನದ ಪಟ್ಟಿಯಲ್ಲಿ ಶಾಸಕ ವೇದವ್ಯಾಸ್ ಅವರ ವಿಳಾಸದಲ್ಲಿ ತಪ್ಪಾಗಿದ್ದು, ಕೆಲಕಾಲ ಗೊಂದಲ ಉಂಟಾಗಿತ್ತು. ಮತದಾನದ ಪಟ್ಟಿಯಲ್ಲಿ ಶಾಸಕರ ತಂದೆಯ ಹೆಸರಿನಲ್ಲಿ ಎಡವಟ್ಟು ಮಾಡಿಕೊಂಡ ಹಿನ್ನಲೆಯಲ್ಲಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.