LATEST NEWS
ಉಳ್ಳಾಲ ಸಮುದ್ರ ತೀರದಲ್ಲಿ ನಿಷೇಧಿತ ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ಇಬ್ಬರು ಅರೆಸ್ಟ್

ಮಂಗಳೂರು ಸೆಪ್ಟೆಂಬರ್ 30: ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಬಂಧಿಸಿದ್ದಾರೆ. ಬಂಧಿತರಿಂದ 14 ಗ್ರಾಂ ತೂಕದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
