Connect with us

  LATEST NEWS

  ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದವ ಅರೆಸ್ಟ್

  ಮಂಗಳೂರು ಮಾರ್ಚ್ 22: ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದಾರೆ.


  ಬಂಧಿತನನ್ನು ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂದು ಗುರುತಿಸಲಾಗಿದ್ದು, ಆರೋಪಿ ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ನೆಹರೂ ಮೈದಾನದ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ನ್ನು ಮಾರಾಟ ಮಾಡುತ್ತಿದ್ದವನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಯಿಂದ ರೂ. 2,30,000/- ರೂ ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,40,500/- ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

  ಆರೋಪಿಯು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಯ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿರುತ್ತದೆ.

  Share Information
  Advertisement
  Click to comment

  You must be logged in to post a comment Login

  Leave a Reply