LATEST NEWS
ಅತ್ಯಂತ ದುಬಾರಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಅತ್ಯಂತ ದುಬಾರಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಮಂಗಳೂರು ಸಪ್ಟೆಂಬರ್ 26: ಮಂಗಳೂರು ಹೊರವಲಯದ ಕುಂಟಿಕಾನ ಎಂಬಲ್ಲಿ ನಿಷೇಧಿತ ಅತ್ಯಂತ ದುಬಾರಿ ಮಾದಕ ವಸ್ತು ಎಂ ಡಿ , ಎಂ ಎ ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ 3 ಮಂದಿ ಅರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಗುರುಪುರ ನಿವಾಸಿ ಮಹಮದ್ ಶಾಕೀರ್, ಪಂಜಿಮೊಗರು ನಿವಾಸಿ ನದೀಮ್, ಹಾಗು ಕಾವೂರು ನಿವಾಸಿ ಫಕ್ರುದ್ದೀನ್ ಎಂದು ಗುರುತಿಸಲಾಗಿದೆ.

ಮಂಗಳೂರಿನ ಸನ್ ರಾಯಲ್ ರೆಸಿಡೆನ್ಸಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಬಳಿ ನಿಷೇದಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ದೊರೆತಿತ್ತು. ಈ ಹನ್ನೆಲೆಯಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು 3 ಜನರನ್ನು ವಸ್ತುಗಳ ಸಮೇತ ಬಂಧಿಸಿದ್ದಾರೆ.
ಬಂಧಿತರಿಂದ 3 ಮೊಬೈಲ್ ಫೋನ್ , 74025 ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಸಪಡಿಸಿ ಮಾದಕ ವಸ್ತು ಹಾಗು ಸೊತ್ತುಗಳ ಒಟ್ಟು ಮೌಲ್ಯ ರೂ 2.20 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.